Advertisement
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ 130 ಅಪಘಾತಗಳು ಸಂಭವಿಸಿವೆ. ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ರಸ್ತೆ ಸುರಕ್ಷತಾ ಕ್ರಮ, ಜಾಗೃತಿ ಕಾರ್ಯಕ್ರಮ ನಡೆಸಿ ಪ್ರತೀ ತಿಂಗಳು ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಶಾಲೆಗಳಲ್ಲಿ ಜಾಗೃತಿ
ಜಿಲ್ಲೆಯ ಶಾಲೆಗಳ ಆವರಣಗೋಡೆಗಳಲ್ಲಿ ಚಿತ್ರಕಲಾ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವ ಚಿತ್ರಗಳನ್ನು ಬಿಡಿಸುವ ಸ್ಪರ್ಧೆಯನ್ನು ಇನ್ನೊಂದು ತಿಂಗಳಲ್ಲಿ ಏರ್ಪಡಿಸಬೇಕು.
Related Articles
ಶಾಲಾ ವಾಹನ ಚಾಲಕರು ಮತ್ತು ಮಾಲಕರಲ್ಲಿ ಜಾಗೃತಿ ಮೂಡಿಸಬೇಕು. ನಿಗದಿತಗಿಂತ ಅಧಿಕ ಮಕ್ಕಳನ್ನು ಕರೆದೊಯ್ಯುವ ಶಾಲಾ ವಾಹನಗಳ ನಂಬರ್, ಚಾಲಕರು, ಮಾಲಕರ ಬಗ್ಗೆ ಆಯಾ ಶಾಲೆಯ ಮುಖ್ಯೋಪಾಧ್ಯಾಯರು ಇಲಾಖೆಗೆ ಮಾಹಿತಿ ನೀಡಬೇಕು ಎಂದವರು ಹೇಳಿದರು.
Advertisement
ಮೇಲ್ವಿಚಾರಕರನ್ನು ನೇಮಿಸಿವಿದ್ಯಾರ್ಥಿಗಳು ಪರವಾನಿಗೆ ಇಲ್ಲದೇ ವಾಹನ ಚಲಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವ ಸಲುವಾಗಿ ಜಿಲ್ಲೆಯಲ್ಲಿರುವ 104 ಪಿಯು ಕಾಲೇಜುಗಳನ್ನು ಮೂರು ಗುಂಪುಗಳನ್ನಾಗಿ ಮಾಡಿ ಓರ್ವ ಮೇಲ್ವಿಚಾರಕನನ್ನು ನೇಮಿಸಬೇಕು. ಎಂದು ಹೇಳಿದರು. ಜಿಲ್ಲಾ ಎಸ್‌ಪಿ ನಿಶಾ ಜೇಮ್ಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.