Advertisement

ರಸ್ತೆ, ನೀರು, ಕೆರೆಗಳ ಅಭಿವೃದ್ಧಿಗೆ ಆದ್ಯತೆ: ತಮ್ಮಣ್ಣ

05:17 AM May 24, 2020 | Lakshmi GovindaRaj |

ಮದ್ದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ, ಕೆರೆಕಟ್ಟೆಗಳ ಪುನಶ್ಚೇತನ, ಶಾಲಾ ಕಾಲೇಜುಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು. ಪಟ್ಟಣ ಸೇರಿದಂತೆ ತಾಲೂಕಿನ ಸೀನಪ್ಪನದೊಡ್ಡಿ ಗ್ರಾಮದಲ್ಲಿ 3 ಕೋಟಿ ರೂ.ಗಳ ಅಭಿವೃದ್ಧಿ ಕಾಮ  ಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

Advertisement

ಪ್ರಮುಖವಾಗಿ ದಲಿತ ಕಾಲೋನಿಗಳ ಅಭಿವೃದ್ಧಿಗೂ ಆದ್ಯತೆ ನೀಡಿ ಮಾದರಿ  ಕ್ಷೇತ್ರವನ್ನಾಗಿ ಮಾಡಲಾಗುವು ದು ಎಂದು ಹೇಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬಿಡುಗಡೆ ಗೊಂಡಿರುವ ಅನುದಾನವ ನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ಧಿಗೆ ವೇಗ ಕಲ್ಪಿಸಬೇಕು. ಕಚೇರಿಗಳಿಗೆ ಆಗಮಿಸುವ ರೈತರು, ಮಹಿಳೆಯರ  ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ನಿರ್ವಹಿಸುವಂತೆ ಸೂಚಿಸಿದರು.

ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ 1.30 ಕೋಟಿ ರೂ.ಗಳ ವೆಚ್ಚದಲ್ಲಿ ಸಹಾಯಕ ಕೃಷಿ ನಿರ್ದೇಶಕರ  ನೂತನ  ಚೇರಿ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ, ಶಿವಪುರದ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿಗಳ ನಿರ್ಮಾಣಕ್ಕೆ 96 ಲಕ್ಷ ರೂ. ಹಾಗೂ ತಾಲೂಕಿನ ಸೀನಪ್ಪನದೊಡ್ಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ 75 ಲಕ್ಷ ರೂ.ಗಳ  ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಪುರಸಭೆ ಸದಸ್ಯರಾದ ವನಿತಾ, ಸರ್ವ ಮಂಗಳ, ಸುಮಿತ್ರ, ಪ್ರಸನ್ನ, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಚಿಕ್ಕಮರಿ, ಕೃಷಿಕ ಸಮಾಜದ ಅಧ್ಯಕ್ಷ ಶಿವರಾಮು, ಸಹಾಯಕ ಕೃಷಿ ನಿರ್ದೇಶಕ  ಶ್ರೀನಾಥ್‌, ಕೃಷಿ ಅಧಿಕಾರಿ ಮಂಜು, ಮುಖಂಡರಾದ ಚಂದ್ರು, ದಿಲೀಪ್‌ಕುಮಾರ್‌, ಜಗದೀಶ್‌, ನವೀನ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next