Advertisement
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರಸ್ತೆಗಳು ಹದಗೆಟ್ಟಿವೆ ಎಂಬುದು ಸತ್ಯ. ಹಿಂದಿನ ಸಚಿವರು ಕೋವಿಡ್, ಪ್ರವಾಹದಂಥ ಸಂಕಷ್ಟದ ಮಧ್ಯೆಯೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದರು.
Related Articles
Advertisement
ಹಿಂದುಳಿದ ವರ್ಗಗಳ ಶಾಸ್ವತ ಆಯೋಗ, ಸುಭಾಶ ಆಡಿ ಸಮಿತಿ ವರದಿ ಆಧರಿಸಿ ಪಂಚಮಸಾಲಿ ಸಮುದಾಯಕ್ಕೆ ಮೀಸಲು ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕ ಸ್ಪಂದನೆ ಮಾಡಿದ್ದಾರೆ. ನಮ್ಮ ಸರ್ಕಾರ ಹಾಗೂ ಸಮುದಾಯದ ನಾಯಕನಾದ ನಾನು ಸೇರಿದಂತೆ ಸಮಾಜದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳ ಜೊತೆ ಸಂಪರ್ಕದಲ್ಲಿ ಇದ್ದೇವೆ. ಹೀಗಾಗಿ ಡೆಡ್ ಲೈನ್ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.
ಡೆಡ್ ಲೈನ್ ಕೊಡುವುದು ಸರಿಯಲ್ಲ. ಕಾಂಗ್ರೆಸ್ ಸರ್ಕಾರ ಇದ್ದಾಗ ವಿಜಯಾನಂದ ಕಾಶಪ್ಪನವರ ಧ್ವನಿ ಎಲ್ಲಿ ಹೋಗಿತ್ತು. ಸಮುದಾಯದ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.
ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ವಿಜಯ ಜೋಶಿ ಇತರರು ಉಪಸ್ಥಿತರಿದ್ದರು.