Advertisement

ರಸ್ತೆ ಕಾಮಗಾರಿಗೆ ಚಾಲನೆ

01:01 PM Dec 23, 2019 | Team Udayavani |

ಹಿರೇಕೆರೂರ: ತಾಲೂಕಿನ ದೂದೀಹಳ್ಳಿ ಗ್ರಾಮದಿಂದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಸಿ.ಪಾಟೀಲ ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಭೂಮಿಪೂಜೆ ನೆರವೇರಿಸಿದರು.

Advertisement

ಈ ವೇಳೆ ಮಾತನಾಡಿದ ಶಾಸಕ ಬಿ.ಸಿ.ಪಾಟೀಲ, ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ದೂದೀಹಳ್ಳಿ ಗ್ರಾಮದ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಭವ್ಯ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಈ ವಸತಿ ಶಾಲೆಗಳಿಗೆ ಹೋಗಲು ಅನುಕೂಲವಾಗುವಂತೆ ರೂ 1.56 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದರು.

ತಾಪಂ ಅಧ್ಯಕ್ಷ ರಾಜು ಬಣಕಾರ, ಸದಸ್ಯೆ ಗಂಗಮ್ಮ ಹರಿಜನ, ಜಿಪಂ ಸದಸ್ಯೆ ಸುಮಿತ್ರಾ ಪಾಟೀಲ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಗ್ರಾಮಸ್ಥರು ಹಾಜರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next