ಚಿತ್ರದುರ್ಗ: ಜಿಲ್ಲೆಯಲ್ಲಿ ಹಾದು ಹೋಗುವ ಎರಡು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1197 ಕಿಮೀಉದ್ದದ 33 ರಾಷ್ಟ್ರೀಯ ಹೆದ್ದಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಯನ್ನು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ನೆರವೇರಿಸಿದರು.
ವರ್ಚ್ಯುವಲ್ ಸಭೆ ಮೂಲಕ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಶಾಸಕರಾದ ಟಿ. ರಘುಮೂರ್ತಿ, ಪೂರ್ಣಿಮಾ ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅಪರ ಜಿಲ್ಲಾ ಧಿಕಾರಿ ಸಂಗಪ್ಪ ಮತ್ತಿತರರು ಭಾಗವಹಿಸಿದ್ದರು.
ಆನ್‌ಲೈನ್ ಮೂಲಕ ಭೂಮಿಪೂಜೆ ಹಾಗೂ ಲೋಕಾರ್ಪಣೆ ಮುಗಿಸಿದ ನಂತರ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಜಿಲ್ಲೆಯ ಹೆದ್ದಾರಿಗಳ ಕುರಿತಾಗಿಯೂ ಪ್ರಸ್ತಾಪ ಮಾಡಿದರು. ಚಿತ್ರದುರ್ಗ-ದಾವಣಗೆರೆ ನಡುವೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 4ರ ಷಟ್ಪಥ ಕಾಮಗಾರಿಈಗಾಗಲೇ ಶೇ. 80 ರಷ್ಟು ಪೂರ್ಣಗೊಂಡಿದೆ. ಷಟ³ಥ ಕಾಮಗಾರಿಯನ್ನು 2021 ಮಾರ್ಚ್ ವೇಳೆಗೆ ಮುಗಿಸುವುದಾಗಿ ತಿಳಿಸಿದರು.
ಇದೇ ವೇಳೆ ಹಿರಿಯೂರು-ಚಳ್ಳಕೆರೆ ನಡುವೆ ನಡೆಯುತ್ತಿರುವ 150 ಎ ರಾಷ್ಟ್ರೀಯಹೆದ್ದಾರಿ ಕಾಮಗಾರಿಯನ್ನೂ ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಗಡ್ಕರಿ ಭರವಸೆ ನೀಡಿದರುಎಂದು ಸಭೆಯಲ್ಲಿ ಭಾಗವಹಿಸಿದ್ದ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾಹಿತಿ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಎನ್.ಎಚ್-13 ಚಿತ್ರದುರ್ಗ-ಶಿವಮೊಗ್ಗ ಮಾರ್ಗದ ಅಭಿವೃದ್ಧಿ ಕಾಮಗಾರಿ ಹಾಗೂ ಹೊಸಪೇಟೆ-ಚಿತ್ರದುರ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ-50ರ ಚತುಷ್ಪಥ ಲೋಕಾರ್ಪಣೆಯನ್ನು ಸಚಿವ ನಿತಿನ್ ಗಡ್ಕರಿನೆರವೇರಿಸಿದರು. ವಚ್ಯುìವಲ್ ಸಭೆ ಮೂಲಕಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆಇತರೆ ಮುಖಂಡರು ಮಾತನಾಡಿ ರಾಜ್ಯದ ವಿವಿಧ ಬೇಡಿಕೆಗಳನ್ನು ಕೇಂದ್ರದ ಸಾರಿಗೆ ಸಚಿವರಿಗೆ ತಿಳಿಸಿದರು.
ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಭಾಗವಹಿಸಿದ್ದರು.