Advertisement

ತಿಂಗಳಾಡಿ ರಸ್ತೆಯ ಬದಿ ತ್ಯಾಜ್ಯ: ಕ್ರಮಕ್ಕೆ ಆಗ್ರಹ

02:23 AM Jun 17, 2019 | sudhir |

ಕೆಯ್ಯೂರು : ಕುಂಬ್ರ- ತಿಂಗಳಾಡಿ- ಮಾಡಾವು ರಸ್ತೆಯ ತಿಂಗಳಾಡಿಯಲ್ಲಿ ಮಾಂಸ ತ್ಯಾಜ್ಯವನ್ನು ಎಸೆದು ಹೋಗುತ್ತಿದ್ದು, ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Advertisement

ತಿಂಗಳಾಡಿ ಪಶು ವೈದ್ಯ ಕೇಂದ್ರದ ಪಕ್ಕದ ರಸ್ತೆ ಬದಿಯಲ್ಲಿ ಕೋಳಿ ಹಾಗೂ ಇತರ ಮಾಂಸದ ತ್ಯಾಜ್ಯಗಳನ್ನು ರಸ್ತೆ ಬದಿ ಎಸೆದು ಹೋಗುತ್ತಿರುವುದರಿಂದ ಪರಿಸರದಲ್ಲಿ ದುರ್ನಾತ ಬೀರುತ್ತಿದ್ದು, ಜನರಿಗೆ ರೋಗ ಭೀತಿ ಎದುರಾಗಿದೆ. ರಾತ್ರಿ ಸಮಯದಲ್ಲಿ ವಾಹನಗಳಲ್ಲಿ ಕೋಳಿ ತ್ಯಾಜ್ಯಗಳನ್ನು ತಂದು ಇಲ್ಲಿ ಸುರಿದು ಹೋಗುತ್ತಿದ್ದಾರೆ.

ಬೀದಿ ನಾಯಿಗಳ ಕಾಟ

ರಸ್ತೆಯ ಬದಿಯಲ್ಲಿ ಮಾಂಸ ತ್ಯಾಜ್ಯಗಳನ್ನು ಎಸೆದು ಹೋಗು ತ್ತಿರುವುದರಿಂದ ಈ ತ್ಯಾಜ್ಯಗಳನ್ನು ತಿನ್ನಲು ನಾಯಿಗಳ ಹಿಂಡೇ ಬರುತ್ತಿದೆ. ಇದರಿಂದ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ರಸ್ತೆಯಲ್ಲಿ ಅತ್ತಿಂದಿತ್ತ ಹೋಗುತ್ತಿರುವ ಬೀದಿ ನಾಯಿಗಳು ಕೆಲವೊಮ್ಮೆ ದ್ವಿಚಕ್ರ ವಾಹನದ ಹಿಂದೆ ಬೆನ್ನಟ್ಟಿಕೊಂಡು ಬರುತ್ತಿದ್ದು, ಇದು ವಾಹನ ಸವಾರರಿಗೆ ತೊಂದರೆಯಾಗಿದೆ.

ಕ್ರಮಕ್ಕೆ ಒತ್ತಾಯ

Advertisement

ಸಾರ್ವಜನಿಕ ರಸ್ತೆಯಲ್ಲಿ ಈ ರೀತಿಯಲ್ಲಿ ತ್ಯಾಜ್ಯ ಎಸೆದು ಪರಿಸರಕ್ಕೆ ಸಮಸ್ಯೆ ಉಂಟು ಮಾಡುವ ಕಿಡಿಗೇಡಿಗಳ ವಿರುದ್ಧ ಸ್ಥಳೀಯಾಡಳಿತ ಸೂಕ್ತ ಕ್ರಮ ಕೈಗೊಂಡು, ಮುಂದೆ ಇಂತಹ ಸಮಸ್ಯೆ ಬಾರದ ರೀತಿಯಲ್ಲಿ ಸಂಬಂಧಪಟ್ಟವರಿಗೆ ಸೂಚನೆ ನೀಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

– ಗೋಪಾಲಕೃಷ್ಣ ಸಂತೋಷ್‌ ನಗರ

Advertisement

Udayavani is now on Telegram. Click here to join our channel and stay updated with the latest news.

Next