ರಿಲೀಫ್ ಸಿಕ್ಕರೆ, ಅದರ ಬೆನ್ನಲ್ಲೇ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ. ಎಸ್. ಈಶ್ವರಪ್ಪ ಪಿಎ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ ಪೊಲೀಸರು ನೋಟೀಸ್ ನೀಡಿದ್ದಾರೆ.
Advertisement
ಡಾ. ಶಿವರಾಮ ಕಾರಂತ ಬಡಾವಣೆಯ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೆಲ ಜಮೀನುಗಳನ್ನು ಕೈ ಬಿಡುವಂತೆ ಸೂಚಿಸಿ ಡಿನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಯಡಿಯೂರಪ್ಪ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್ ದಾಖಲಿ ಸಿದ್ದ ಭ್ರಷ್ಟಾಚಾರ ನಿಗ್ರಹ ದಳದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಎಸಿಬಿಗೆ ತೀವ್ರ ಹಿನ್ನಡೆಯಾಗಿದೆ. ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡು ವಂತೆ ಯಡಿಯೂರಪ್ಪ ಸಲ್ಲಿಸಿದ್ದ ಮಧ್ಯಂ ತರ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯ ಮೂರ್ತಿಅರವಿಂದಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ಶಿವರಾಮ ಕಾರಂತ ಬಡಾವಣೆಯ ನಿರ್ಮಾಣದ ಅಂತಿಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ. ಹೀಗಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟಾಗಿದೆ ಎಂಬ ವಾದದಲ್ಲಿ ಹುರುಳಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.
Related Articles
Advertisement
ಪ್ರಕರಣ ಏನು?: ಡಾ. ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನವನ್ನು ಪ್ರಾಥಮಿಕ ಅಧಿಸೂಚನೆಯಿಂದ 257.25 ಗುಂಟೆ ಎಕರೆ ಜಮೀನು ಕೈ ಬಿಡಲು ಭೂ ಮಾಲೀಕರಿಂದ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ ಹಣಪಡೆದುಕೊಂಡಿದ್ದು ಅಕ್ರಮ ಎಸಗಿದ್ದಾರೆ. ಈ ಸಂಬಂಧ ತನಿಖೆ ನಡೆಸುವಂತೆ ಕೋರಿ ದಾಖಲಾಗಿದ್ದ ದೂರಿನ ಅನ್ವಯ ಎಸಿಬಿ ಮೊದಲ ಹಂತವಾಗಿ 2009ರಿಂದ 2012 ರ ಅವಧಿಯಲ್ಲಿ ಯಲಹಂಕ ಹೋಬಳಿಯ ಆವಲಹಳ್ಳಿ ಗ್ರಾಮದ ಸರ್ವೇ ನಂಬರ್ 109/ 1 ರಲ್ಲಿ 3 ಎಕರೆ 6 ಗುಂಟೆ ಜಮೀನು ಡಿನೋಟಿಫಿಕೇಶನ್ ಸಂಬಂಧ ಆಗಸ್ಟ್ 10ರಂದು ಹಾಗೂ ಯಶವಂತಪುರ ಹೋಬಳಿ ಸೋಮಶೆಟ್ಟಿ ಗ್ರಾಮದ ಸರ್ವೇ ನಂಬರ್ 22/2ರಲ್ಲಿರುವ 18ಗುಂಟೆ ಹಾಗೂ ಸರ್ವೇನಂಬರ್ 24/ 1 ಎಕರೆ 8 ಗುಂಟೆ ಜಮೀನು ಡಿನೋಟಿಫಿಕೇಶನ್ ಸಂಬಂಧ ಆಗಸ್ಟ್ 17ರಂದು ಪ್ರತ್ಯೇಕ ಎಫ್ ಐಆರ್‌ಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ಈ ಎರಡೂ ಎಫ್ಐಆರ್‌ಗಳ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.
ನೋಟಿಸ್ ಯಾಕೆ?ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಆಪ್ತ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ಮಲ್ಲೇಶ್ವರಂ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಎ.ಆರ್. ಬಡಿಗೇರ್ ಶುಕ್ರವಾರ ಬಿಎಸ್‌ವೈಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ದೂರುದಾರ ವಿನಯ್‌ಗೂ ಶನಿವಾರ ವಿಚಾರಣೆಗೆ ಬರಲು ಹೇಳಲಾಗಿದೆ. ನನ್ನನ್ನು ಸಿಲುಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಇಲಾಖೆ ಸಲಹೆಗಾರ ಕೆಂಪಯ್ಯ ಹಾಗೂ ಇತರ ಅಧಿಕಾರಿಗಳು ರೂಪಿಸಿದ್ದ ಸಂಚು ವಿಫಲವಾಗಿದೆ. ಕೇವಲ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಕೋರ್ಟ್ ತಡೆಯಾಜ್ಞೆ ನೀಡಿದ ತಕ್ಷಣ ಯಡಿಯೂರಪ್ಪ ನಿರಪರಾಧಿ ಆಗುವುದಿಲ್ಲ. ನ್ಯಾಯಾಲಯಗಳಲ್ಲಿ ಸಹಜವಾಗಿಯೇ ತಡೆಯಾಜ್ಞೆ ದೊರೆಯುತ್ತದೆ. ತಡೆಯಾಜ್ಞೆ ತೆರವುಗೊಳಿಸಲು ಎಸಿಬಿಗೆ ಅವಕಾಶ ಇದೆ. ಎಸಿಬಿ ತನ್ನ ಪ್ರಯತ್ನ ಮಾಡುತ್ತದೆ.
ರಾಮಲಿಂಗಾ ರೆಡ್ಡಿ, ಗೃಹ ಸಚಿವ.