ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ರಾಬರ್ಟ್’ ಚಿತ್ರದ ಎರಡನೆ ಹಾಡಿನ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದ್ದು, ಶನಿವಾರ ಸಂಜೆ (ಫೆ.20) 4:05 ಕ್ಕೆ ಹಾಡು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ತಿಳಿಸಿದೆ.
‘ಕಣ್ಣು ಹೊಡಿಯಾಕ’ ಎಂಬ ಸಾಲುಗಳನ್ನು ಒಳಗೊಂಡಿರುವ ಈ ಹಾಡು ಉತ್ತರ ಕರ್ನಾಟಕ ಶೈಲಿಯಲ್ಲಿ ಮೂಡಿಬರುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ನಿರ್ದೇಶಕ ತರುಣ್ ಸುಧೀರ್ , ಯೋಗ್ ರಾಜ್ ಭಟ್ ಸಾಹಿತ್ಯದಲ್ಲಿ ಉತ್ತರ ಕರ್ನಾಟಕ ಶೈಲಿಯಲ್ಲಿ ಮಾಡಲಾಗಿರುವ ಈ ಹಾಡನ್ನು ನಾಳೆ (ಫೆ.20) ಸಂಜೆ 4:05 ಕ್ಕೆ ಬಿಡುಗಡೆಗೊಳಿಸುತ್ತಿದ್ದೇವೆ . ವೀಕ್ಷಿಸಲು ತಯಾರಾಗಿ ಎಂದಿದ್ದಾರೆ.
ಇದನ್ನೂ ಓದಿ:ಪಿಎಫ್ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಗೃಹ ಸಚಿವ ಬೊಮ್ಮಾಯಿ
ಈ ಹಿಂದೆ ಕಳೆದ ವರ್ಷ ಏಪ್ರಿಲ್ ನಲ್ಲಿ ಬಿಡುಗಡೆಗೊಳಿಸಿದ್ದ ಚಿತ್ರದ ‘ಜೈ ಶ್ರೀ ರಾಮ್’ ಹಾಡು 1 ಕೋಟಿಗೂ ಹೆಚ್ಚು ವೀಕ್ಷಣೆಯನ್ನು ಕಾಣುವ ಮೂಲಕ ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡಿತ್ತು. ಆ ಬಳಿಕ ಇತ್ತೀಚೆಗಷ್ಟೆ ಚಿತ್ರದ ಟ್ರೇಲರ್ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿದ್ದು, ಟ್ರೇಲರ್ ಕೂಡಾ ಯೂಟ್ಯೂಬ್ ನಲ್ಲಿ ಏಳು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿತ್ತು.
ತರುಣ್ ಸುಧೀರ್ ಆ್ಯಕ್ಷನ್ ಕಟ್ ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ವಿ. ಹರಿಕೃಷ್ಣ ಅವರ ಸಂಗೀತದ ಮೋಡಿ ಇರಲಿದ್ದು ಚಿಕ್ಕಣ್ಣ, ವಿನೋದ್ ಪ್ರಭಾಕರ್ ಸೇರಿದಂತೆ ಹಲವು ತಾರೆಯರು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.