Advertisement

ಫೆಬ್ರವರಿ 28ರಂದು ಹುಬ್ಬಳ್ಳಿಯಲ್ಲಿ ‘ರಾಬರ್ಟ್’ ಪ್ರೀ-ರಿಲೀಸ್ ಸಂಭ್ರಮ..!

03:11 PM Feb 22, 2021 | Team Udayavani |

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಟರಾಗಿ ಅಭಿನಯಿಸಿರುವ ರಾಬರ್ಟ್ ಚಿತ್ರ ಬರುವ ಮಾರ್ಚ್ 11 ರಂದು ಬಿಡುಗಡೆಯಾಗುತ್ತಿದೆ. ಚಿತ್ರತಂಡದಿಂದ ಈಗಾಗಲೇ ಪ್ರಮೋಷನ್ ಕಾರ್ಯ ಕೂಡ ಜೋರಾಗಿ ನಡೆಯುತ್ತಿದೆ. ಚಿತ್ರತಂಡ ಪ್ರೀ-ರಿಲೀಸ್ ಕಾರ್ಯಕ್ರಮ ಅದ್ಧೂರಿಯಾಗಿ ಆಯೋಜಿಸಲು ಯೋಜನೆ ಹಾಕಿಕೊಂಡಿದೆ. ಸದ್ಯ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಸ್ಥಳ ಹಾಗೂ ಡೇಟ್ ಕೂಡ ನಿಗದಿಯಾಗಿದೆ.

Advertisement

ಹೌದು, ಇದು ಡಿ ಬಾಸ್ ಅಭಿಮಾನಿಗಳ ಸಂಭ್ರಮ ಇಮ್ಮಡಿಸುವ ವಿಷಯ. ರಾಬರ್ಟ್ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಆಯೋಜಿಸಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.  ಫೆಬ್ರವರಿ 28 ರ ಸಂಜೆ 6 ಗಂಟೆಗೆ ಹುಬ್ಬಳ್ಳಿಯ ದೇಸಾಯಿ ಸರ್ಕಲ್, ಕೇಶ್ವಾಪುರ ರೋಡ್ ಪಕ್ಕದಲ್ಲಿರುವ ರೈಲ್ವೆ ಮೈದಾನ ರಾಬರ್ಟ್ ಪ್ರೀ-ರಿಲೀಸ್ ಇವೆಂಟ್ ಗೆ ಸಾಕ್ಷಿಯಾಗಲಿದೆ.

ಕುರುಕ್ಷೇತ್ರ, ಯಾಜಮಾನ ಸಿನಿಮಾಗಳ ಬಳಿಕ ದರ್ಶನ್ ಅವರು ರಾಬರ್ಟ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನವಿದೆ. ಉಮಾಪತಿ ಬಂಡವಾಳ ಹಾಕಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಶಿವರಾತ್ರಿ ನಿಮಿತ್ತ ರಾಬರ್ಟ್ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ತೆರೆ ಕಾಣಲಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೈಲರ್ ಹಾಗೂ ಗೀತೆಗಳು ಸಿನಿ ರಸಿಕರ ಮನಸೂರೆಗೊಳಿಸಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿವೆ.

Advertisement

Udayavani is now on Telegram. Click here to join our channel and stay updated with the latest news.

Next