Advertisement

ಭಾರತದ ರಾಯಭಾರ ಕಚೇರಿಗೆ ರಾಕೆಟ್‌ ದಾಳಿ

12:37 PM Jan 16, 2018 | Team Udayavani |

ಕಾಬೂಲ್‌: ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಆವರಣದಲ್ಲಿ ಸೋಮವಾರ ರಾಕೆಟ್‌ವೊಂದು ಅಪ್ಪಳಿಸಿದ ಘಟನೆ ನಡೆದಿದೆ. ಇದರಿಂದಾಗಿ ದೂತಾವಾಸ ಕಚೇರಿಯ ಕಟ್ಟಡಕ್ಕೆ ಹಾನಿಯಾಗಿದೆ. 

Advertisement

ರಾಕೆಟ್‌ ಬಂದು ಬಿದ್ದೊಡನೆ ಒಳಗಿದ್ದವರಲ್ಲಿ ಆತಂಕ ಮೂಡಿದ್ದು, ಕೂಡಲೇ ಎಲ್ಲರನ್ನೂ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ರಾಯಭಾರಿ ಕಚೇರಿಯಲ್ಲಿನ ಎಲ್ಲ ಸಿಬ್ಬಂದಿಯೂ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next