Advertisement

ರಾಕ್‌ಲೈನ್‌ ವೆಂಕಟೇಶ್‌ಗೆ ಕೋವಿಡ್‌ 19 ಸೋಂಕು

05:11 AM Jul 10, 2020 | Lakshmi GovindaRaj |

ಕೋವಿಡ್ 19 ಸಮಸ್ಯೆಯಿಂದ ದಿನಪ್ರತಿ ಸೋಂಕಿತರ ಸಂಖ್ಯೆ, ಸಾವನ್ನಪ್ಪುತ್ತಿರುವ ಸಂಖ್ಯೆಯೂ ಏರಿಕೆ ಕಾಣುತ್ತಿದೆ. ಆದರೆ ಮತ್ತೊಂದು ಕಡೆ ಕೋವಿಡ್ ಸೋಂಕಿನ ಪರೋಕ್ಷ ಹೊಡೆತದಿಂದ ಹಲವರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದೀಗ ಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್‌ 19 ಇರುವುದು ದೃಢವಾಗಿದೆ. ಇತ್ತೀಚೆಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಕೋವಿಡ್‌ 19 ದೃಢಪಟ್ಟಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

Advertisement

ರಾಕ್‌ಲೈನ್‌ ವೆಂಕಟೇಶ್‌ ಅವರು  ಸುಮಲತಾ ಅವರೊಂದಿಗೆ ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಹಿರಿಯ ನಟ ದೊಡ್ಡಣ್ಣ ಭಾಗಿಯಾಗಿದ್ದರು. ರಾಕ್‌ಲೈನ್‌ ವೆಂಕಟೇಶ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  ನಟ ದೊಡ್ಡಣ್ಣ ಅವರನ್ನು ಹೋಮ್‌ ಕ್ವಾರಂಟೈನ್‌ ಮಾಡಲಾಗಿದೆ. ಅಲ್ಲದೇ ದೊಡ್ಡಣ್ಣ ಕಲಾವಿದರ ಸಂಘದ ಖಜಾಂಚಿಯಾಗಿರುವುದರಿಂದ ಮನೆಯಿಂದಲೇ ಸಂಘದ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next