Advertisement

ರೊಹಿಂಗ್ಯಾ: ಮಧ್ಯಂತರ ಆದೇಶಕ್ಕೆ ಸುಪ್ರೀಂ ನಕಾರ

06:00 AM Mar 20, 2018 | Team Udayavani |

ನವದೆಹಲಿ: ಮ್ಯಾನ್ಮಾರ್‌ನಿಂದ ದೇಶದೊಳಕ್ಕೆ ಬಂದಿರುವ ರೊಹಿಂಗ್ಯಾ ನಿರಾಶ್ರಿತರಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆ ನೀಡುವ ಬಗ್ಗೆ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಸೋಮವಾರ ಹೇಳಿದೆ. ನಿರಾಶ್ರಿತರಿಗೆ ಉತ್ತಮ ಆರೋಗ್ಯ, ಶಿಕ್ಷಣ ಸೌಲಭ್ಯ ನೀಡಬೇಕು ಎಂದು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಇದೇ ಸಂದರ್ಭದಲ್ಲಿ ಸೌಲಭ್ಯ ನೀಡಿಕೆಯಲ್ಲಿ ವಲಸಿಗರು, ದೇಶವಾಸಿಗಳು ಎಂದು ತಾರತಮ್ಯ ಮಾಡುವುದಿಲ್ಲ ಎಂದು ಹೇಳಿತು. 

Advertisement
Advertisement

Udayavani is now on Telegram. Click here to join our channel and stay updated with the latest news.

Next