Advertisement

ಹಾಸನ ಜಿಲ್ಲಾಧಿಕಾರಿ ಹುದ್ದೆಗೆ ಮತ್ತೆ ರೋಹಿಣಿ ಸಿಂಧೂರಿ 

06:35 AM Jun 26, 2018 | Team Udayavani |

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಸಾಕಷ್ಟು ವಿವಾದಗಳಿಗೆ ಕಾರಣವಾಗಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಗೊಂದಲಕ್ಕೆ ತೆರೆ ಬಿದ್ದಿದೆ. ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಆದೇಶ ಹೊರಡಿಸಿದೆ.

Advertisement

ಇನ್ನೊಂದೆಡೆ ತಮ್ಮನ್ನು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆಗೊಳಿಸಿದ್ದ ಆದೇಶ ಎತ್ತಿಹಿಡಿದಿದ್ದ ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಇತ್ಯರ್ಥಗೊಳಿಸಿದೆ. ಸಿಎಟಿ ತೀರ್ಪು ಪ್ರಶ್ನಿಸಿ ರೋಹಿಣಿ ಸಲ್ಲಿಸಿದ್ದ ಅರ್ಜಿ ಸೋಮವಾರ ಹೈಕೋರ್ಟ್‌ನಲ್ಲಿ ನ್ಯಾ.ಎಚ್‌.ಜಿ.ರಮೇಶ್‌, ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಾಗ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ ಅವರು, ರೋಹಿಣಿ ಸಿಂಧೂರಿ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯ ಪೀಠ, ಮುಂದಿನ ಕ್ರಮ ಕೈಗೊಳ್ಳಿ ಎಂದು ಸರ್ಕಾರಕ್ಕೆ ಸೂಚಿಸಿ ಅರ್ಜಿಯನ್ನು ಇತ್ಯರ್ಥಗೊಳಿಸಿತು.

ಹೈಕೋರ್ಟ್‌ನಲ್ಲಿ ಅರ್ಜಿ ಇತ್ಯರ್ಥಗೊಳ್ಳುತ್ತಿದ್ದಂತೆ ಇತ್ತ ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ಸರ್ಕಾರ, ಇದುವರೆಗೆ ಆ ಹುದ್ದೆಯಲ್ಲಿದ್ದ ಡಾ.ಪಿ.ಸಿ.ಜಾಫ‌ರ್‌ ಅವರನ್ನು ಅಲ್ಲಿಂದ ವರ್ಗ ಮಾಡಿದೆ.ಆದರೆ, ಯಾವುದೇ ಹುದ್ದೆ ತೋರಿಸಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next