ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಶರತ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿದೆ.
ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದ ರೋಹಿಣಿ ಸಿಂಧೂರಿಯವರನ್ನು ಮೈಸೂರು ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿಯೂ ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸಿದ್ದರು.
ಇದನ್ನೂ ಓದಿ:ಸಂಪುಟ ಸರ್ಕಸ್: ದಿಲ್ಲಿ ನಡೆ ನಿಗೂಢ; ಮೂವರನ್ನು ಕೈ ಬಿಡಲು ಬಿಎಸ್‌ವೈ ಚಿಂತನೆ
ಈ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅವರನ್ನು ವರ್ಗಾವಣೆ ಮಾಡಿ ಆದೇಶ ನೀಡಿತ್ತು. ಈ ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ರಾಜ್ಯ ಹೈಕೋರ್ಟ್ ಇತ್ಯರ್ಥಪಡಿಸಿ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶಿಸಿತ್ತು.
ಬೃಹತ್ ಬೆಂಗಳೂರು ವಿಶೇಷ ಆಯುಕ್ತರಾಗಿ(ಆರೋಗ್ಯ ಮತ್ತು ಐಟಿ) ಪಿ ರಾಜೇಂದ್ರ ಚೋಳನ್, ಬೃಹತ್ ಬೆಂಗಳೂರು ವಿಶೇಷ ಆಯುಕ್ತರಾಗಿ (ಎಸ್ಟೇಟ್) ಜೆ ಮಂಜುನಾಥ್, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ಗೆ ನಿರ್ವಹಣಾ ನಿರ್ದೇಶಕರಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ವರ್ಗಾವಣೆ ಮಾಡಲಾಗಿದೆ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ