Advertisement

ಹಾಸನ ಡೀಸಿ ರೋಹಿಣಿ ಎತ್ತಂಗಡಿ

01:40 AM Feb 23, 2019 | |

ಬೆಂಗಳೂರು/ಹಾಸನ: ಅಂತೂ, ಇಂತೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಅಲ್ಪಸಂಖ್ಯಾತರ ಇಲಾಖೆ ನಿರ್ದೇಶನಾಲಯದ ನಿರ್ದೇಶಕರಾಗಿದ್ದ ಅಕ್ರಂ ಪಾಶಾ ಅವರನ್ನು ನಿಯೋಜಿಸಲಾಗಿದೆ.

Advertisement

ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿ
ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಒತ್ತಡ
ಇತ್ತಾದರೂ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇದೇ ಸಂದರ್ಭದಲ್ಲಿ ಡಾ.ಎಂ.ವಿ.ವೆಂಕಟೇಶ್‌ ಅವರನ್ನು ರಾಷ್ಟ್ರೀಯ ತೋಟಗಾರಿಕಾ ಮಿಷನ್‌ ನಿರ್ದೇ
ಶಕರನ್ನಾಗಿ, ಕೃಷ್ಣ ಬಾಜಪೇಯಿ ಅವರನ್ನು ಹಾವೇರಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಮತ್ತೆ ನ್ಯಾಯಾಲಯದ ಮೆಟ್ಟಿಲೇರಲು ಚಿಂತನೆ?
ಈ ಮಧ್ಯೆ, ಹಾಸನದಲ್ಲೇ ಇದ್ದರೂ ನೂತನ ಜಿಲ್ಲಾಧಿಕಾರಿಯವರಿಗೆ ಕಾರ್ಯಭಾರ ವಹಿಸಿ ಕೊಡಲು ರೋಹಿಣಿ ಸಿಂಧೂರಿ ಅವರು ಕಚೇರಿಗೆ ಬರಲಿಲ್ಲ. ಅಪರ ಜಿಲ್ಲಾಧಿಕಾರಿ ಎಂ.ಎಲ್‌.ವೈಶಾಲಿ
ಅವರಿಂದ ಅಕ್ರಂ ಪಾಷಾ ಅವರು ಕಾರ್ಯಭಾರ ವಹಿಸಿಕೊಂಡರು. ಅಲ್ಲದೆ, ಅವಧಿ ಪೂರ್ವ ವರ್ಗಾ
ವಣೆಯನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿಯವರು ಮತ್ತೆ ನ್ಯಾಯಾಲಯದ ಮೆಟ್ಟಿಲೇರಲಿದ್ದಾರೆ ಎಂದು
ಅಧಿಕಾರಿಗಳ ವಲಯದಲ್ಲಿ ಚರ್ಚೆ ಅರಂಭವಾಗಿದೆ. ಒಂದು ಹುದ್ದೆಯಲ್ಲಿ ಐಎಎಸ್‌ ಅಧಿಕಾರಿಗಳನ್ನು ಕನಿಷ್ಠ 2 ವರ್ಷದ ಅವಧಿಗಿಂತ ಮೊದಲು ವರ್ಗ ಮಾಡಬಾರದೆಂಬ ನಿಯಮ ಆಧರಿಸಿ ನ್ಯಾಯಾಲಯದಲ್ಲಿ ಹೋರಾಟ ಮಾಡಿ ಹಾಸನ ಜಿಲ್ಲಾಧಿಕಾರಿ ಹುದ್ದೆಗೆ ಬಂದಿದ್ದ ರೋಹಿಣಿ
ಸಿಂಧೂರಿ, ಈಗ ಮತ್ತೆ ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಹಾಗಾಗಿಯೇ ನೂತನ ಜಿಲ್ಲಾಧಿಕಾರಿಯವರಿಗೆ ಕಾರ್ಯಭಾರ ವಹಿಸಲು ಅವರು ನಿರಾಕರಿಸಿದ್ದಾರೆಂಬ ವದಂತಿ ಹರಡಿದೆ.

Advertisement

Udayavani is now on Telegram. Click here to join our channel and stay updated with the latest news.

Next