Advertisement
ಮುದ್ರಣ ಮತ್ತು ದೃಶ್ಯ ಮಾಧ್ಯಮಗಳು, ಡಿ. ರೂಪಾ ಹಾಗೂ ಇತರ ಎಲ್ಲ ಪ್ರತಿವಾದಿಗಳು ರೋಹಿಣಿ ವಿರುದ್ಧ ಮಾನಹಾನಿಕರ ಹೇಳಿಕೆ, ಫೋಟೋಗಳನ್ನು ಪ್ರಸಾರ ಮಾಡಬಾರದು ಎಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಕುರಿತು ಎಲ್ಲ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಿಗೆ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ರೋಹಿಣಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ರೂಪಾಗೆ ಆಕ್ಷೇಪಣೆ ಸಲ್ಲಿಸಲು ಕಾಲವಕಾಶ ನೀಡಿ ಮಾ. 7ಕ್ಕೆ ವಿಚಾರಣೆ ಮುಂದೂಡಿದೆ. ತಮ್ಮ ವಿರುದ್ಧ ಯಾವುದೇ ಮಾನಹಾನಿಕಾರದ ಹೇಳಿಕೆ, ಫೋಟೋಗಳನ್ನು ನೀಡಂತೆ ತಡೆಯಾಜ್ಞೆ ನೀಡಬೇಕು ಎಂದು ರೋಹಿಣಿ ಸಿಂಧೂರಿ ಕೋರ್ಟ್ ಮೊರೆ ಹೋಗಿದ್ದರು.
ಇದೇ ವೇಳೆ ಡಿ. ರೂಪಾ ವಿರುದ್ಧ ಐಟಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ರೋಹಿಣಿ ಸಿಂಧೂರಿನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸುಧೀರ್ ರೆಡ್ಡಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ ಪೊಲೀಸರು ಅರ್ಜಿ ರೀತಿ ಪಡೆದು ಕಾನೂನು ಸಲಹೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ದೂರು ನೀಡಿ ನಾಲ್ಕು ದಿನಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ರೂಪಾ ವಿರುದ್ಧ ಕೂಡಲೇ ಐಟಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಪತ್ರದಲ್ಲಿ ಉಲ್ಲೇಖೀಸಿದ್ದಾರೆ.