Advertisement

ರೋಹಿಣಿ ವರ್ಗಾವಣೆ ರಿಟ್‌ ವಿಚಾರಣೆ ಇಂದು

07:20 AM Mar 27, 2018 | Team Udayavani |

ಬೆಂಗಳೂರು: ರಾಜ್ಯಸರ್ಕಾರದ ಏಕಾಏಕಿ ವರ್ಗಾವಣೆ ಆದೇಶ ಹಾಗೂ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ)
ನಿರ್ದೇಶನ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಮಂಗಳವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.

Advertisement

ಮುಖ್ಯನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅರ್ಜಿ ವಿಚಾರಣೆ ನಡೆಯಲಿದೆ.

ರೋಹಿಣಿ ಸಿಂಧೂರಿ ಪರ ವಕೀಲರು ಸೋಮವಾರ ಮುಖ್ಯನ್ಯಾಯ ಮೂರ್ತಿ ದಿನೇಶ್‌ ಮಹೇಶ್ವರಿ ಅವರಿದ್ದ ವಿಭಾಗೀಯ ಪೀಠದ ಮುಂದೆ ಹಾಜರಾಗಿ ಅರ್ಜಿಯನ್ನು ತುರ್ತು ವಿಚಾರಣೆ ಸಲ್ಲಿಸುವಂತೆ ಜ್ಞಾಪನಾ ಪತ್ರ ( ಮೆಮೊ) ಸಲ್ಲಿಸಿದರು.

ಅರ್ಜಿದಾರ ಅಧಿಕಾರಿಯ ವರ್ಗಾವಣೆ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ಸಿಎಟಿ, ಮಾ.26ರ ಒಳಗೆ ವರ್ಗಾವಣೆ ಮಾಡಿರುವ ಆದೇಶವನ್ನು ಪರಿಶೀಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲು ಸೂಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next