ದುಬೈ: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂದುವರಿದ ಭಾಗ ಇಂದಿನಿಂದ ಯುಎಇ ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ.
ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇದುವರೆಗೆ ಟಿ20 ಕ್ರಿಕೆಟ್ ನಲ್ಲಿ 397 ಸಿಕ್ಸರ್ ಬಾರಿಸಿರುವ ರೋಹಿತ್ ಶರ್ಮಾ ಇನ್ನು ಮೂರು ಸಿಕ್ಸರ್ ಬಾರಿಸಿದರೆ 400 ಸಿಕ್ಸರ್ ಬಾರಿಸಿದ ಮೊದಲ ಭಾರತೀಯ ಎಂಬ ದಾಖಲೆಗೆ ಪಾತ್ರರಾಗಲಿದ್ದಾರೆ.
ಇದನ್ನೂ ಓದಿ:ಒಂದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ರಕ್ಷಿತ್ ಶೆಟ್ಟಿ-ರಶ್ಮಿಕಾ ಮಂದಣ್ಣ
ರೋಹಿತ್ ಶರ್ಮಾ ಅವರು ಐಪಿಎಲ್ ನಲ್ಲಿ 224 ಸಿಕ್ಸರ್ ಹೊಡೆದಿದ್ದಾರೆ. ಇದರಲ್ಲಿ ಮುಂಬೈ ಇಂಡಿಯನ್ಸ್ ಪರ 173 ಸಿಕ್ಸರ್ ಮತ್ತು ಡೆಕ್ಕನ್ ಚಾರ್ಜರ್ಸ್ ಪರ 51 ಸಿಕ್ಸರ್ ಬಾರಿಸಿದ್ದಾರೆ.
ಅತೀ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಸುರೇಶ್ ರೈನಾ 324 ಸಿಕ್ಸ್ ಹೊಡೆದಿದ್ದಾರೆ. ವಿರಾಟ್ ಕೊಹ್ಲಿ 315 ಸಿಕ್ಸರ್ ಮತ್ತು ಮಹೇಂದ್ರ ಸಿಂಗ್ ಧೋನಿ 303 ಸಿಕ್ಸ್ ಬಾರಿಸಿ ನಂತರದ ಸ್ಥಾನದಲ್ಲಿದ್ದಾರೆ.