Advertisement
“ಇದು ನಿಮ್ಮಿಂದ (ಮಾಧ್ಯಮ) ಪ್ರಾರಂಭವಾಗುತ್ತದೆ ಎಂದು ನಾನು ಭಾವಿಸುತ್ತೇನೆ, ನಿಮ್ಮ ಕಡೆಯಿಂದ ಮಾತನಾಡುವುದನ್ನು ನಿಲ್ಲಿಸಿದರೆ, ಎಲ್ಲವನ್ನೂ ನೋಡಿಕೊಳ್ಳಲಾಗುವುದು” ಎಂದು ರೋಹಿತ್ ಹೇಳಿದರು.
Related Articles
Advertisement
ತಂಡದಲ್ಲಿ ಬದಲಾವಣೆ: ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಮಂಡಿರಜ್ಜು ನೋವಿಗೆ ಒಳಗಾಗಿದ್ದಾರೆ. ಹೀಗಾಗಿ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಸುಂದರ್ ಬದಲಿಗೆ ಚೈನಮನ್ ಸ್ಪಿನ್ನರ್ ಕುಲದೀಪ್ ಯಾದವ್ ಆಯ್ಕೆಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಉಪನಾಯಕ ಕೆ ಎಲ್ ರಾಹುಲ್ ಅವರು ಗಾಯದ ಕಾರಣದಿಂದ ಮತ್ತು ಆಲ್ ರೌಂಡರ್ ಅಕ್ಷರ್ ಪಟೇಲ್ ಅವರು ಕೋವಿಡ್ ನಿಂದ ಸಂಪೂರ್ಣ ಚೇತರಿಸದ ಕಾರಣದಿಂದ ಟಿ20 ಸರಣಿಯಿಂದ ಹೊರಬಿದ್ದಿದ್ದರು.
ಫೆ.16ರಂದು ಮೊದಲ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ಉಪನಾಯಕ) (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಕುಲದೀಪ್ ಯಾದವ್.