Advertisement

ಫಿಟ್ ನೆಸ್ ಟೆಸ್ಟ್ ನಲ್ಲಿ ತೇರ್ಗಡೆಯಾದ ರೋಹಿತ್: ಆಸೀಸ್ ಗೆ ಹಾರಲಿದ್ದಾರೆ ಹಿಟ್ ಮ್ಯಾನ್

01:19 PM Dec 11, 2020 | keerthan |

ಬೆಂಗಳೂರು: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ. ಟೀಂ ಇಂಡಿಯಾದ ಪ್ರಮುಖ ಆಟಗಾರ ರೋಹಿತ್ ಶರ್ಮ ಫಿಟ್ ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನ ಎನ್ ಸಿಎ ನಲ್ಲಿ ರೋಹಿತ್ ಫಿಟ್ ನೆಸ್ ಪರೀಕ್ಷೆಯಲ್ಲಿ ಪಾಸಾಗಿ ಆಸೀಸ್ ಗೆ ಹಾರಲು ಸಿದ್ದರಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ.

Advertisement

ಸುದ್ದಿಸಂಸ್ಥೆ ಪಿಟಿಐ ಈ ಬಗ್ಗೆ ವರದಿ ಮಾಡಿದೆ. ಕಳೆದ ಐಪಿಎಲ್ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮ ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ ನೆಸ್ ತರಬೇತಿಯಲ್ಲಿದ್ದರು. ಇಂದು ಅಂತಿಮ ಪರೀಕ್ಷೆ ನಡೆದಿದ್ದು, ಅದರಲ್ಲಿ ರೋಹಿತ್ ಸಂಪೂರ್ಣ ಫಿಟ್ ಆಗಿದ್ದಾರೆ ಎಂದು ವರದಿಯಾಗಿದೆ.

ರೋಹಿತ್ ಶನಿವಾರ ಆಸೀಸ್ ವಿಮಾನ ಏರುವುದು ಬಹುತೇಕ ಖಚಿತವಾಗಿದೆ. ಆಸೀಸ್ ನಲ್ಲಿ 14 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿರುವ ಕಾರಣ ರೋಹಿತ್ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ಕ್ವಾರಂಟೈನ್ ನಿಯಮ ಸಡಿಲಿಕೆಗೆ ಕ್ರಿಕೆಟ್ ಆಸ್ಟ್ರೇಲಿಯಾಗೆ ಬಿಸಿಸಿಐ ಮನವಿ ಮಾಡಿದ್ದು, ಒಂದು ವೇಳೆ ಹಾಗಾದಲ್ಲಿ ಎರಡನೇ ಟೆಸ್ಟ್ ಪಂದ್ಯದಿಂದಲೇ ರೋಹಿತ್ ತಂಡಕ್ಕೆ ಲಭ್ಯರಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next