ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ರವಿವಾರದಿಂದ ಆರಂಭವಾಗಲಿದೆ. ಅಹಮದಾಬಾದ್ ನ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂರು ಪಂದ್ಯಗಳ ಸರಣಿ ನಡೆಯಲಿದೆ.
ಸರಣಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ಆಘಾತ ಎದುರಾಗಿತ್ತು. ತಂಡದ ಸದಸ್ಯರಾದ ಶಿಖರ್ ಧವನ್, ಋತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್ ಗೆ ಕೋವಿಡ್ 19 ಸೋಂಕು ದೃಢವಾಗಿದೆ. ಹೀಗಾಗಿ ಮಯಾಂಕ್ ಅಗರ್ವಾಲ್ ಮತ್ತು ಇಶಾನ್ ಕಿಶನ್ ಅವರನ್ನು ತಂಡಕ್ಕೆ ಸೇರಿಸಲಾಗಿದೆ.
ಆದರೆ ಮಯಾಂಕ್ ಅಗರ್ವಾಲ್ ಇನ್ನೂ ಕ್ವಾರಂಟೈನ್ ನಲ್ಲಿದ್ದಾರೆ. ರವಿವಾರ ಅವರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದೆ. ಹೀಗಾಗಿ ಮಯಾಂಕ್ ಮೊದಲ ಪಂದ್ಯಕ್ಕೆ ಲಭ್ಯರಾಗುವುದಿಲ್ಲ. ಅತ್ತ ಉಪ ನಾಯಕ ಕೆ.ಎಲ್.ರಾಹುಲ್ ಕೂಡಾ ವೈಯಕ್ತಿಕ ಕಾರಣದಿಂದ ಮೊದಲ ಪಂದ್ಯಕ್ಕೆ ಲಭ್ಯರಿರುವುದಿಲ್ಲ.
ಇದನ್ನೂ ಓದಿ:ಕೊಹ್ಲಿ- ಸಚಿನ್ ದಾಖಲೆ ಮುರಿಯುವ ಸನಿಹದಲ್ಲಿ ರೋಹಿತ್ ಶರ್ಮ
ಹೀಗಾಗಿ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮ ಹೇಳಿಕೊಂಡಿದ್ದಾರೆ. ಇಶಾನ್ ಕಿಶನ್ ಮಾತ್ರ ನಮ್ಮಲ್ಲಿರುವ ಆಯ್ಕೆ. ಹೀಗಾಗಿ ನಾನು ಮತ್ತು ಇಶಾನ್ ಇನ್ನಿಂಗ್ಸ್ ಆರಂಭಿಸಲಿದ್ದೇವೆ ಎಂದು ರೋಹಿತ್ ಹೇಳಿದರು.