ಲಂಡನ್: ಬ್ರಿಟನ್ ಪ್ರವಾಸದಲ್ಲಿರುವ ಭಾರತ ತಂಡಕ್ಕೆ ಭಾರಿ ಹಿನ್ನಡೆಯಾಗಿದ್ದು, ಮಂಗಳವಾರದ ನೆಟ್ ಸೆಷನ್ ವೇಳೆ ನಾಯಕ ರೋಹಿತ್ ಶರ್ಮಾ ಎಡಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ.
ರೆವ್ ಸ್ಪೋರ್ಟ್ಸ್ ಪ್ರಕಾರ, ಎಡಗೈಗೆ ಹೊಡೆತ ತಿಂದ ನಂತರ ರೋಹಿತ್ ವೈದ್ಯಕೀಯ ನೆರವು ಪಡೆದರು. ಗಾಯದ ಪ್ರಮಾಣದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ ಫೈನಲ್ ಪಂದ್ಯಕ್ಕೆ ರೋಹಿತ್ ಲಭ್ಯತೆಯ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿಲ್ಲ.
ಫಿಸಿಯೋ ಕಮಲೇಶ್ ಅವರ ಬಳಿ ಚಿಕಿತ್ಸೆ ಪಡೆದ ನಂತರ ರೋಹಿತ್ ಮತ್ತೆ ಗ್ಲೌಸ್ ಗಳನ್ನು ಹಾಕಿಕೊಂಡು ಬ್ಯಾಟಿಂಗ್ ಮುಂದುವರೆಸಿದರು. ಹೀಗಾಗಿ ಗಾಯ ಗಂಭೀರವಾಗಿಲ್ಲ ಎನ್ನಲಾಗಿದೆ.
ಡಬ್ಲ್ಯೂಟಿಸಿ ಫೈನಲ್ ಗೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು
Related Articles
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿ.ಕೀ), ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿ.ಕೀ), ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮೈಕೆಲ್ ನೆಸರ್, ಸ್ಟೀವ್ ಸ್ಮಿತ್ (ಉ.ನಾ), ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್.