Advertisement
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ಆರಂಭದಲ್ಲಿಯೇ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. 33 ರನ್ ಗೆ ಮೂರು ವಿಕೆಟ್ ಕಳೆದುಕೊಂಡಿದ್ದ ವೇಳೆ ರವೀಂದ್ರ ಜಡೇಜಾ ಮತ್ತು ರೋಹಿತ್ ಶರ್ಮಾ ಜತೆಗೂಡಿ ಉತ್ತಮ ಜೊತೆಯಾಟವಾಡಿದರು.
Related Articles
Advertisement
ಇದೇ ವೇಳೆ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸಿಕ್ಸರ್ ದಾಖಲೆ ಮುರಿದರು. ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿ ಭಾರತೀಯರ ಪಟ್ಟಿಯಲ್ಲಿ ರೋಹಿತ್ ಎರಡನೇ ಸ್ಥಾನಕ್ಕೇರಿದರು. 90 ಸಿಕ್ಸರ್ ಬಾರಿಸಿರುವ ವೀರೇಂದ್ರ ಸೆಹವಾಗ್ ಮೊದಲ ಸ್ಥಾನದಲ್ಲಿದ್ದರೆ, 79 ಸಿಕ್ಸರ್ ನೊಂದಿಗೆ ರೋಹಿತ್ ಎರಡನೇ ಸ್ಥಾನದಲ್ಲಿದ್ದಾರೆ. ಎಂ.ಎಸ್ ಧೋನಿ 78 ಸಿಕ್ಸರ್ ಹೊಡೆದಿದ್ದರು.
ಇಂಗ್ಲೆಂಡ್ ವಿರುದ್ಧ ಭಾರತದ ಆರಂಭಿಕ ಆಟಗಾರನಾಗಿ ಅತಿ ಹೆಚ್ಚು ಟೆಸ್ಟ್ ಶತಕಗಳನ್ನು ಬಾರಿಸಿದವರ ಪಟ್ಟಿಯಲ್ಲಿ ರೋಹಿತ್ ಜಂಟಿಯಾಗಿ ಎರಡನೇ ಸ್ಥಾನಕ್ಕೇರಿದರು. ನಾಲ್ಕು ಶತಕ ಬಾರಿಸಿದ ಸುನಿಲ್ ಗವಾಸ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ವಿಜಯ್ ಮರ್ಚಂಟ್, ಮುರಳಿ ವಿಜಯ್, ಕೆಎಲ್ ರಾಹುಲ್ ಮತ್ತು ರೋಹಿತ್ ಅವರು ತಲಾ ಮೂರು ಶತಕದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.