ಬೆಂಗಳೂರು: ಗಾಯದ ಸಮಸ್ಯೆಯಿಂದ ಆಸೀಸ್ ಸರಣಿಯಿಂದ ಹೊರಗುಳಿದಿರುವ ರೋಹಿತ್ ಶರ್ಮಾ ಕೊನೆಯ ಎರಡು ಟೆಸ್ಟ್ ಗಳಿಗೆ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ. ಸದ್ಯ ಬೆಂಗಳೂರಿನ ಎನ್ ಸಿಎ ದಲ್ಲಿರುವ ರೋಹಿತ್ ಬಹುತೇಕ ಫಿಟ್ ಆಗಿದ್ದಾರೆ ಎನ್ನುತ್ತಿದೆ ಮೂಲಗಳು.
ಡಿ.11ರಂದು ರೋಹಿತ್ ಶರ್ಮಾರ ಫಿಟ್ ನೆಸ್ ಪರೀಕ್ಷೆ ನಡೆಯಲಿದೆ. ಇದರಲ್ಲಿ ಶರ್ಮಾ ಸಂಪೂರ್ಣ ಫಿಟ್ ಎಂದು ವರದಿ ಬಂದಲ್ಲಿ ಅವರು ಮರುದಿನ (ಡಿ. 12) ಆಸೀಸ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಆದರೆ ಆಸೀಸ್ ನಲ್ಲಿ 14 ದಿನಗಳ ಕ್ವಾರಂಟೈನ್ ಕಡ್ಡಾಯ ಆಗಿರುವ ಕಾರಣ ಡಿ.12ರಂದು ತೆರಳಿದರೂ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.
ಇದೇ ವೇಳೆ ಮೊದಲ ಟಿ20 ಪಂದ್ಯದ ವೇಳೆ ಗಾಯಗೊಂಡಿದ್ದ ಆಲ್ ರೌಂಡರ್ ರವೀಂದ್ರ ಜಡೇಜಾ ಮೊದಲ ಟೆಸ್ಟ್ ಪಂದ್ಯಕ್ಕೂ ಲಭ್ಯವಾಗುವುದು ಅನುಮಾನ ಎನ್ನಲಾಗಿದೆ. ಕ್ಯಾನ್ ಬೆರಾ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ವೇಳೆ ಜಡೇಜಾ ಗಾಯಗೊಂಡಿದ್ದರು.
ಇದನ್ನೂ ಓದಿ:ಆಸೀಸ್ ವಿರುದ್ಧ ಟಿ20 ಸರಣಿ ಗೆದ್ದು ಹೊಸ ದಾಖಲೆ ಬರೆದ ಕ್ಯಾಪ್ಟನ್ ಕೊಹ್ಲಿ
ಡಿ.17ರಿಂದ ಭಾರತ- ಆಸೀಸ್ ನಡುವಿನ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯಲಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಾಯಕ ವಿರಾಟ್ ಕೊಹ್ಲಿ ಮೊದಲ ಟೆಸ್ಟ್ ಬಳಿಕ ಭಾರತಕ್ಕೆ ಮರಳಲಿದ್ದಾರೆ.