ಮುಂಬೈ: ಮುಂದಿನ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಗಾಯಗೊಂಡಿದ್ದ ನಾಯಕ ರೋಹಿತ್ ಶರ್ಮಾ ಫಿಟ್ ಆಗಿ ತಂಡಕ್ಕೆ ಮರಳಿದ್ದು, ಪೂರ್ಣಕಾಲಿಕ ನಾಯಕನಾಗಿ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಲಿದ್ದಾರೆ.
ಬುಧವಾರ ತಡರಾತ್ರಿ ತಂಡ ಪ್ರಕಟ ಮಾಡಲಾಗಿದೆ. ವೇಗಿಗಳಾದ ಬುಮ್ರಾ ಮತ್ತು ಶಮಿಗೆ ವಿಶ್ರಾಂತಿ ನೀಡಲಾಗಿದ್ದು, ಗಾಯಗೊಂಡಿರುವ ಅಶ್ವಿನ್ ಆಯ್ಕೆಯಾಗಿಲ್ಲ. ವೆಂಕಟೇಶ್ ಅಯ್ಯರ್ ಮತ್ತು ಭುವನೇಶ್ವರ್ ಕುಮಾರ್ ಟಿ20 ಸರಣಿಗೆ ಮಾತ್ರ ಆಯ್ಕೆಯಾಗಿದ್ದಾರೆ.
ಅದಲ್ಲದೆ ಆಲ್ ರೌಂಡರ್ ದೀಪಕ್ ಹೂಡಾ ಮತ್ತು ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ಆಯ್ಕೆ ಮಾಡಲಾಗಿದೆ. ವಿಶೇಷವೆಂದರೆ ಕುಲದೀಪ್ ಯಾದವ್ (ಏಕದಿನ ಮಾತ್ರ) ಮತ್ತು ವಾಷಿಂಗ್ಟನ್ ಸುಂದರ್ ತಂಡಕ್ಕೆ ಮರಳಿದ್ದಾರೆ. ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ಇನ್ನೂ ಫಿಟ್ ಆಗಿಲ್ಲ.
ಫೆ.6ರಿಂದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಆರಂಭವಾಗಲಿದ್ದು, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳು ನಡೆಯಲಿದೆ. ಏಕದಿನ ಪಂದ್ಯಗಳು ಅಹಮದಾಬಾದ್ ನಲ್ಲಿ ಮತ್ತು ಟಿ20 ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆಯಲಿದೆ.
ಏಕದಿನ ತಂಡ: ರೋಹಿತ್ ಶರ್ಮಾ (ನಾ), ಕೆಎಲ್ ರಾಹುಲ್ (ಉ.ನಾ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್-ಕೀಪರ್), ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್
ಟಿ20 ತಂಡ: ರೋಹಿತ್ ಶರ್ಮಾ (ನಾ), ಕೆಎಲ್ ರಾಹುಲ್ (ಉ.ನಾ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್ , ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್