ಚತ್ತೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಭಾರತ “ಎ’ ತಂಡದ ನಾಯಕ ಅಭಿಮನ್ಯು ಈಶ್ವರನ್ ಅವರನ್ನು ಸೇರಿಸಿಕೊಳ್ಳಲಾಗಿದೆ.
ದ್ವಿತೀಯ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮ ಎಡಗೈ ಬೆರಳಿನ ಗಾಯಕ್ಕೆ ಸಿಲುಕಿದ್ದರು. ಹೀಗಾಗಿ 3ನೇ ಪಂದ್ಯದಿಂದ ಹೊರಗುಳಿಯ ಬೇಕಾಯಿತು. ಇದೀಗ ಮೊದಲ ಟೆಸ್ಟ್ ನಿಂದಲೂ ಬೇರ್ಪಟ್ಟಿದ್ದಾರೆ.
ಈಗಾಗಲೇ ಗಾಯಾಳು ಮೊಹ ಮ್ಮದ್ ಶಮಿ ಮತ್ತು ರವೀಂದ್ರ ಜಡೇಜ ಬದಲು ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಎಡಗೈ ಪೇಸ್ ಬೌಲರ್ ಜೈದೇವ್ ಉನಾದ್ಕತ್ ಕೂಡ ಟೀಮ್ ಇಂಡಿಯಾದಲ್ಲಿದ್ದಾರೆ.
ಮೊದಲ ಟೆಸ್ಟ್ ಪಂದ್ಯ ಡಿ. 14ರಂದು ಆರಂಭವಾಗಲಿದ್ದು, ಕೆ.ಎಲ್. ರಾಹುಲ್ ಭಾರತ ತಂಡವನ್ನು ಮುನ್ನಡೆಸುವರು.
ಪರಿಷ್ಕೃತ ತಂಡ: ಕೆ.ಎಲ್. ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆ.ಎಸ್. ಭರತ್, ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜೈದೇವ್ ಉನಾದ್ಕತ್.