ಮುಂಬೈ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಟಿ20 ತಂಡದ ನಾಯಕತ್ವಕ್ಕೆ ವಿದಾಯ ಹೇಳಿರುವುದು ಗೊತ್ತಿರುವ ವಿಚಾರ. ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಅವರು ನಾಯಕ ಪಟ್ಟದಿಂದ ಕೆಳಕ್ಕಿಳಿಯುತ್ತಿದ್ದಾರೆ.
ಸದ್ಯ ಉಪ ನಾಯಕನಾಗಿರುವ ರೋಹಿತ್ ಶರ್ಮಾ ಅವರು ಟಿ20 ವಿಶ್ವಕಪ್ ನಂತರ ಭಾರತದ ತಂಡ ಟಿ20 ತಂಡದ ನಾಯಕನಾಗುವುದು ಬಹುತೇಕ ಖಚಿತವಾಗಿದೆ. ಆದರೆ ಸದ್ಯದ ಸುದ್ದಿಯ ಪ್ರಕಾರ ವಿರಾಟ್ ಕೊಹ್ಲಿ ಅವರು ಏಕದಿನ ತಂಡದ ನಾಯಕತ್ವದಿಂದಲೂ ಕೆಳಕ್ಕಿಳಿಯಲಿದ್ದಾರೆ.
ಇದನ್ನೂ ಓದಿ:ತಿಂಗಳಿಗೆ 75 ಸಾವಿರ ರೂ. ದುಡಿಯುತ್ತಿದೆ ಒಂದು ವರ್ಷದ ಮಗು! ಹೇಗೆ ಗೊತ್ತಾ?
ಟಿ20 ವಿಶ್ವಕಪ್ ಬಳಿಕ ರೋಹಿತ್ ಶರ್ಮಾ ಅವರನ್ನು ಟಿ20 ಮತ್ತು ಏಕದಿನ ತಂಡದ ನಾಯಕರನ್ನಾಗಿ ನೇಮಕ ಮಾಡಲಾಗುತ್ತದೆ. ವಿರಾಟ್ ಕೊಹ್ಲಿ ಅವರು ಟೆಸ್ಟ್ ತಂಡದ ನಾಯಕನಾಗಿ ಮಾತ್ರ ಮುಂದುವರಿಯಲಿದ್ದಾರೆ ಎನ್ನುತ್ತಿದೆ ವರದಿ.
ಇನ್ನು ಎರಡು ವರ್ಷದಲ್ಲಿ ಎರಡು ವಿಶ್ವಕಪ್ ನಡೆಯಲಿದೆ. 2022ರಲ್ಲಿ ಟಿ20 ವಿಶ್ವಕಪ್ ಮತ್ತು 2023ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಹೀಗಾಗಿ ಈ ಎರಡೂ ವಿಶ್ವಕಪ್ ಗಳಿಗೆ ಈಗಿನಿಂದಲೇ ತಯಾರಿ ಮಾಡುವ ಕಾರಣ ರೋಹಿತ್ ಶರ್ಮಾಗೆ ಎರಡೂ ತಂಡದ ನಾಯಕತ್ವ ನೀಡಲಾಗುತ್ತದೆ ಎನ್ನಲಾಗಿದೆ.