ಮುಂಬಯಿ: ಚಿತ್ರೀಕರಣ ವೇಳೆ ನಡೆದ ಅವಘಡದಲ್ಲಿ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಗಾಯಗೊಂಡಿದ್ದು ಅವರನ್ನು ಹೈದರಾಬಾದ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೋಹಿತ್ ಶೆಟ್ಟಿ ಅವರು ಹೈದರಾಬಾದ್ ರಾಮೋಜಿ ಫಿಲ್ಮ್ ಸಿಟಿಯಲ್ಲಿ ‘ಇಂಡಿಯನ್ ಪೊಲೀಸ್ ಫೋರ್ಸ್’ ವೆಬ್ ಸಿರೀಸ್ ನ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೆಯುತ್ತಿರುವ ವೇಳೆ ಅವಘಡ ಸಂಭವಿಸಿ ಅವರ ಬೆರಳುಗಳಿಗೆ ಗಾಯವಾಗಿತ್ತು. ಕೂಡಲೇ ಅವರನ್ನು ಹೈದರಾಬಾದ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸದ್ಯ ರೋಹಿತ್ ಶೆಟ್ಟಿ ಚೇತರಿಸಿಕೊಳ್ಳುತ್ತಿದ್ದಾರೆ ಆತಂಕ ಪಡಬೇಕಾಗಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ‘ಇಂಡಿಯನ್ ಪೊಲೀಸ್ ಫೋರ್ಸ್’ ಎಂಬ ವೆಬ್ ಸರಣಿಯನ್ನು ರೋಹಿತ್ ಶೆಟ್ಟಿ ನಿರ್ದೇಶಿಸುತ್ತಿದ್ದು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ಧೂರಿ ಸೆಟ್ ನಿರ್ಮಿಸಿದ್ದಾರೆ.
ವೆಬ್ ಸೀರಿಸ್ ಚಿತ್ರೀಕರಣದ ವೇಳೆ ಈ ಮೊದಲು ನಟ ಸಿದ್ಧಾರ್ಥ್ ಮಲ್ಹೋತ್ರಾ ಕೂಡ ಗಾಯಗೊಂಡಿದ್ದರು. ಅಲ್ಲದೆ ನಟಿ ಶಿಲ್ಪಾ ಶೆಟ್ಟಿ ಕಾಲಿಗೂ ಗಾಯವಾಗಿತ್ತು ಈಗ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ: ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯ ನಿರೀಕ್ಷೆ: ಸಿಎಂ ಬೊಮ್ಮಾಯಿ