Advertisement
ಅವರು ಇಂದು (ಮಾರ್ಚ್ 25) ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಗ್ರಾಮದಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ಸತ್ಯಸಾಯಿ ಲೋಕಸೇವಾ ಟ್ರಸ್ಟ್ನಿಂದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡಿದ್ದಾರೆ.
Related Articles
Advertisement
ಭಾರತವು ತನ್ನ ‘ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ಅಭಿವೃದ್ಧಿ ಹೊಂದಿದ ದೇಶವಾಗುವ ಹಾದಿಯಲ್ಲಿ ನಡೆಯಲು ನಿರ್ಧರಿಸಿದೆ. ಆದರೆ ಇಷ್ಟು ಕಡಿಮೆ ಅವಧಿಯಲ್ಲಿ ಈ ಸಾಧನೆಯನ್ನು ದೇಶ ಹೇಗೆ ಸ್ವೀಕರಿಸುತ್ತದೆ ಎಂಬ ಪ್ರಶ್ನೆಗಳು ಎದ್ದಿವೆ. ಅದು ಹೇಗೆ ಕಾರ್ಯಸಾಧ್ಯವಾಗುತ್ತದೆ? ಇಂತಹ ಪ್ರಶ್ನೆಗಳಿಗೆ ಒಂದೇ ಒಂದು ಉತ್ತರ ‘ಎಲ್ಲರ ಪ್ರಯತ್ನ’ ಎಂದು ಮೋದಿ ಹೇಳಿದರು.
ಕರ್ನಾಟಕವು ಋಷಿಮುನಿಗಳು, ಆಶ್ರಮಗಳು, ಮಠಗಳ ಶ್ರೀಮಂತ ಭೂಮಿಯಾಗಿದೆ. ಈ ಪ್ರಾಚೀನ ಸಂಪ್ರದಾಯಗಳು ಇಲ್ಲಿ ಹೆಚ್ಚು ಜೀವಂತವಾಗಿವೆ. ಚಿಕ್ಕಬಳ್ಳಾಪುರದ ನಾಡು ಜನರಿಗೆ ಶಿಕ್ಷಣ ಮತ್ತು ಆರೋಗ್ಯವನ್ನು ನೀಡುವ ಮೂಲಕ ಮಾನವೀಯತೆಯ ಸೇವೆಯ ಧ್ಯೇಯವನ್ನು ಪೋಷಿಸಿದೆ. ಈ ಸಾಧನೆಗಳು ಅದ್ಭುತವಾಗಿವೆ. ಇದಲ್ಲದೆ, ಇಂದು ಇಲ್ಲಿ ಉದ್ಘಾಟನೆಗೊಳ್ಳುತ್ತಿರುವ ವೈದ್ಯಕೀಯ ಕಾಲೇಜು ಈ ಮಹಾನ್ ಧ್ಯೇಯವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.
ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿಗೆ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಮುದ್ದೇನಹಳ್ಳಿ ಗ್ರಾಮಕ್ಕೆ ಬಂದಿಳಿದ ಮೋದಿ, ಅಲ್ಲಿಂದ ನೇರವಾಗಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಮ್ಯೂಸಿಯಂಗೂ ಭೇಟಿ ನೀಡಿದರು.