ಗಜೇಂದ್ರಗಡ: ಹತ್ತು ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಅಭಿವೃದ್ಧಿ ಹರಿಕಾರರಾದ ಶಾಸಕ ಕಳಕಪ್ಪ ಬಂಡಿ ಗೆಲುವು ಶತಸಿದ್ಧ ಎಂದು ಪುರಸಭೆ ಉಪಾಧ್ಯಕ್ಷೆ ಲೀಲಾವತಿ ವನ್ನಾಲ ಹೇಳಿದರು.
ಪಟ್ಟಣದ 7ನೇ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಶಾಸಕ ಕಳಕಪ್ಪ ಬಂಡಿ ಪರ ಶನಿವಾರ ಪ್ರಚಾರ ನಡೆಸಿ ಮಾತನಾಡಿದ ಅವರು, ಶಾಸಕ ಕಳಕಪ್ಪ ಬಂಡಿ ಇಲ್ಲಿನ ಜನತೆಗೆ ಮೂಲ ಸೌಕರ್ಯ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಗಜೇಂದ್ರಗಡದ ಪ್ರಮುಖ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆ ನಿಗಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ವಾರ್ಡ್‌ನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕರಪತ್ರ ನೀಡಿ ಮತಯಾಚನೆ ಮಾಡಿದರು.
ಉಣಚಗೇರಿಯಲ್ಲಿ ಸೊಸೆಯಿಂದ ಪ್ರಚಾರ: ಪಟ್ಟಣದ 23ನೇ ವಾರ್ಡ್‌ನ ಉಣಚಗೇರಿಯಲ್ಲಿ ಶಾಸಕ ಕಳಕಪ್ಪ ಬಂಡಿ ಸೊಸೆಯಾದ ಅನುಷಾ ಬಂಡಿ ಪ್ರಚಾರ ನಡೆಸಿದರು. ಗ್ರಾಮದ ಮತದಾರರ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದರು.
ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ, ವಿಜಯಲಕ್ಷಿ ಚಟ್ಟೇರ ಸೇರಿದಂತೆ ಬಿಜೆಪಿ ಮುಖಂಡರು ಇದ್ದರು.