Advertisement

ರೋಣ : ಭಾರಿ ಮಳೆಗೆ ಮನೆ ಕುಸಿದು ಬಿದ್ದು 70 ವರ್ಷದ ವೃದ್ಧೆ ಸಾವು

11:23 AM Oct 14, 2020 | sudhir |

ರೋಣ(ಗದಗ): ನಿರಂತರ ಮಳೆಗೆ ಮನೆ ಕುಸಿದು ಮಣ್ಣಿನಡಿ ಸಿಲುಕಿ ವೃದ್ದೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ನಡೆದಿದೆ.

Advertisement

ಗ್ರಾಮದ ಶಂಕ್ರವ್ವ ನಿಂಗನಗೌಡ ಭೀಮನಗೌಡ್ರ(70) ಎಂಬ ವೃದ್ಧೆ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಬಹಿರ್ದೆಸೆಗೆ ಹೋಗಿ ಬರುವ ವೇಳೆ ಎದುರು ಮನೆ ಕುಸಿದು ವೃದ್ಧೆ ಮೇಲೆ ಬಿದ್ದಿದೆ.

ತಕ್ಷಣ ನೆರೆಹೊರೆಯವರು ರಕ್ಷಣೆ ದಾವಿಸಿದರು. ಆದರೆ, ಸ್ಥಳೀಯರ ಪ್ರಯತ್ನ ಫಲಿಸಲಿಲ್ಲ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಸ್ಥಳಕ್ಕೆ ಅಧಿಕಾರಿಗಳು‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಒಂದು ಕಡೆ ತಗ್ಗು ಪ್ರದೇಶಗಳು ಜಲಾವೃತಗೊಂಡರೆ, ಇನ್ನೊಂದೆಡೆ ರೈತರು ಬೆಳೆದ ಬೆಳೆಗಳು ನಾಶವಾಗುತ್ತಿವೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next