Advertisement
ತಾಲೂಕಿನಲ್ಲಿ 158 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಸದ್ಯ ಕಾರ್ಯ ನಿರ್ವಹಿಸುತ್ತಿದ್ದು, ಈ ಪೈಕಿ ಹಳ್ಳಿಯಲ್ಲಿನ ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಸುಮಾರು ವರ್ಷಗಳಿಂದ ಹುದ್ದೆಗಳು ಖಾಲಿಯಿದ್ದು, ಭರ್ತಿಗೊಳಿಸಿಲ್ಲ. ಗ್ರಾಮೀಣ ಭಾಗದಲ್ಲಿ ಕೆಲವೆಡೆ ವಿದ್ಯಾರ್ಥಿಗಳಿಂದ ಪಾಠ ಬೋಧನೆ ನಡೆಯುತ್ತಿದ್ದರೆ, ಮತ್ತೊಂದೆಡೆ ಶಾಲೆಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿ ವರ್ಷವಿಡಿ ಕಳೆಯಲಾಗಿದೆ. ಕಾಯಂ ಶಿಕ್ಷಕರಿಲ್ಲದ ಪರಿಣಾಮ ಮಕ್ಕಳ ಕಲಿಕೆಗೆ ಅಡಚಣೆ ಉಂಟಾಗಿದೆ.
Related Articles
ಕಾಯಂ ಶಿಕ್ಷಕರನ್ನು ನಿಯೋಜಿಸಬೇಕಿದೆ.
Advertisement
ಖಾಲಿಯಿರುವ ಹುದ್ದೆಗಳ ಭರ್ತಿಗೆ ಮನವಿತಾಲೂಕಿನ ಸರಕಾರಿ ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಗೊಳಿಸಲು ಮೇಲ ಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ. ಸರಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕರನ್ನು ನಿಯೋಜಿಸಿ ಮಕ್ಕಳಿಗೆ ಶಿಕ್ಷಣ ಕೊಡಿಸಲಾಗಿದೆ. ಕಳೆದ ವರ್ಷ ಶಿಕ್ಷಕರ ನೇಮಕಾತಿ ನಡೆದಿದೆ. ಸರ್ಕಾರ ನೇಮಕ ಮಾಡಿಕೊಂಡರೂ ಶಿಕ್ಷಕ ರಿಗೆ ಆದೇಶ ನೀಡಿ ಸ್ಥಳ ನಿಯುಕ್ತಿ ಮಾಡಿದರೆ ಉತ್ತಮವಾಗುತ್ತದೆ. ಈಗಾಗಲೇ 31ರಿಂದ ಮಕ್ಕಳ ಕಲಿಕೆ ಪ್ರಾರಂಭವಾಗುತ್ತದೆ. ಪಠ್ಯ ಪುಸ್ತಕ ವಿತರಣೆ ಹಾಗೂ ಬಿಸಿಯೂಟ ಅಂದಿ ನಿಂದಲೇ ಪ್ರಾರಂಭವಾಗಲಿದೆ ಎನ್ನುತ್ತಾರೆ
ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿ ಸಜ್ಜನ್. ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತಾಲೂಕಿನ ಬಹುತೇಕ ಸರಕಾರ ಶಾಲೆಗಳಲ್ಲಿ ಶಿಕ್ಷಕರಿಲ್ಲದೇ ಮಕ್ಕಳಿಗೆ ಸರಿಯಾಗಿ ಹಾಗೂ ಗುಣಮಟ್ಟದ ಶಿಕ್ಷಣ ದೊರೆಯದಂತಾಗಿದೆ. ಕಳೆದ ವರ್ಷದಲ್ಲಿ ನೇಮಕಾತಿಗೊಳಿಸಿದ ಶಿಕ್ಷರನ್ನು ಶೀಘ್ರ ಸೇವೆಗೆ ನಿಯೋಜಿಸಬೇಕು. 4-5 ಹುದ್ದೆಗಳ ಕಾಲಿ ಇರುವ ಕಡೆ ಕನಿಷ್ಠ 3 ಹುದ್ದೆಗಳನ್ನು ಭರ್ತಿಗೊಳಿಸಲು ವಿಳಂಬವಾದರೆ ಅಂತಹ ಶಾಲೆಗೆ ಅತಿಥಿ ಶಿಕ್ಷಕರನ್ನು ಕಡ್ಡಾಯವಾಗಿ ನಿಯೋಜಿಸಲು ಸರಕಾರ ಆದೇಶ ಹೊರಡಿಸಬೇಕು ಎನ್ನುತ್ತಾರೆ ಶಿಕ್ಷಣಪ್ರೇಮಿ ಅವಿನಾಶ ಸಾಲಿಮನಿ. ಯಚ್ಚರಗೌಡ ಗೋವಿಂದಗೌಡ್ರ