Advertisement

ಮಠ-ಮಂದಿರಗಳ ಸಾಂಸ್ಕೃತಿಕ ಕಾರ್ಯಕ್ರಮ ಮಾದರಿ: ರೂಪಾ

07:34 PM Mar 23, 2021 | Team Udayavani |

ಸಿರವಾರ : ಸಂಸ್ಕೃತಿ-ಸಂಸ್ಕಾರ ಕಲಿವ ಮಠಗಳು ಜಾತ್ರೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಪ್ರತಿಯೊಬ್ಬರಿಗೆ ಮಾದರಿಯಾಗಲಿವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಹೇಳಿದರು.

Advertisement

ನವಲಕಲ್ಲು ಬೃಹನ್ಮಠದಲ್ಲಿ ಲಿಂ| ಸೋಮಶೇಖರ ಶಿವಾಚಾರ್ಯ ಸ್ವಾಮಿಗಳ 24ನೇ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ಮಕ್ಕಳು ಪಾಶ್ಚಾತ್ಯ ಸಂಸ್ಕೃತಿಗೆ ವಾಲುತ್ತಿರುವುದು ವಿಷಾದನೀಯ. ಆದರೆ, ಇಂತಹ ದಿನಗಳಲ್ಲಿ ಸಂಸ್ಕಾರ ದೊರೆಯುವುದು ಮಠ-ಮಾನ್ಯಗಳಿಂದ ಮಾತ್ರ ಸಾಧ್ಯ. ಜಾತ್ರಾ ಮಹೋತ್ಸವ ನಿಮಿತ್ತ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತೋಷದ ವಿಷಯ ಎಂದರು.

ಯರಡೋಣಿಯ ಮುರುಘೇಂದ್ರ ಸ್ವಾಮೀಜಿ, ಸಿಂಧನೂರಿನ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ನೀಲಗಲ್‌ ಬೃಹನ್ಮಠದ ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ವೀರಘೋಟ ಅಡವಿಲಿಂಗ ಮಹಾರಾಜರು, ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಅನಿತಾ ಬಸವರಾಜ ಮಂತ್ರಿ, ಜೆಡಿಎಸ್‌ ಅಧ್ಯಕ್ಷೆ ವಿಜಯಲಕ್ಷ್ಮಿ ಆದೆಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next