ನಾರಾಯಣಪುರ: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (ರೂಪ್ಸಾ) ನೂತನ ರಾಜ್ಯ ಉಪಾಧ್ಯಕ್ಷರಾಗಿ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ನಾರಾಯಣಪುರದ ಶ್ರೀ ಜೆ.ಎಸ್ ದೇಶಮುಖ ವಿದ್ಯಾಸಂಸ್ಥೆಯ ಅಧ್ಯಕ್ಷ ಗಂಗಾಧರ ಬಿರಾದರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಡಾ. ಹಾಳನೂರು ಲೇಪಾಕ್ಷಿ ಘೊಷಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸಂಘಟನೆ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ಬಿರಾದಾರ ಅವರಿಗೆ ಹಸ್ತಾಂತರಿಸುವ ಮೂಲಕ ಶುಭಕೋರಿದ್ದಾರೆ.
ಇದನ್ನೂ ಓದಿ:ಹಿಂದೂಗಳೇ ಎಲ್ಲೋಗಿದ್ದೀರಾ? ವಿಜಯಲಕ್ಷ್ಮಿ ಕಷ್ಟಕ್ಕೆ ಸ್ಪಂದಿಸದವರ ವಿರುದ್ಧ ಜಗದೀಶ್ ವಾಗ್ದಾಳಿ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶ್ರೀ ಜೆ.ಎಸ್ ದೇಶಮುಖ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಸಮಾಜಕ್ಕೆ ತಮ್ಮದೆಯಾದ ಅಪಾರ ಕೊಡುಗೆಯನ್ನು ನೀಡಿರುವುದನ್ನು ಗುರುತಿಸಿ ಗಂಗಾಧರ ಬಿರಾದಾರ ಅವರನ್ನು ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಶ್ರೀ ದೇಶಮುಖ ವಿದ್ಯಾಸಂಸ್ಥೆಯ ಅಧ್ಯಕ್ಷ ಗಂಗಾಧರ ಎನ್. ಬಿರಾದಾರ ಅವರು (ರೂಪ್ಸಾ) ರಾಜ್ಯ ಉಪಾಧ್ಯಕ್ಷರಾಗಿದಕ್ಕೆ ಶಾಲೆಯ ಮುಖ್ಯ ಶಿಕ್ಷಕಿ ಗೀತಾ ಸಜ್ಜನ,ಶಿಕ್ಷಕ ಶಂಕರ ದಡ್ಡಿ ಹಾಗೂ ಶಿಕ್ಷಕ ವೃಂದದವರು, ಶಾಲಾ ಆಡಳಿತ ಮಂಡಳಿಯವರು,ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.