ಬೆಂಗಳೂರು: ವಿಶ್ವವಿಖ್ಯಾತ ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಸಂಬಂಧ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಶುಕ್ರವಾರ ಸಭೆ ನಡೆಯಿತು.
ಐಡೇಕ್ ಸಂಸ್ಥೆಯು ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಮಾಡುವ ಯೋಜನೆಯ ಪ್ರಾತ್ಯಕ್ಷಿಕೆ ಪ್ರಚು ರಪಡಿಸಿತು. ಈ ಸಂರ್ಭದಲ್ಲಿ ಮಾತನಾಡಿದ ಯೋಗೇಶ್ವರ್, 2.90 ಕಿ.ಮೀ. ಎತ್ತರ ವಿರುವ ನಂದಿ ಗಿರಿಧಾಮಕ್ಕೆ ರೋಪ್ ವೇ ನಿರ್ಮಿಸ ಲಾಗುವುದು. ನಂದಿ ಬೆಟ್ಟದ ಕೆಳಗಡೆ ಅಂದಾಜು 25 ಎಕರೆ ಪ್ರದೇಶದಲ್ಲಿ ವಾಹನ ಪಾರ್ಕಿಂಗ್, ಫುಡ್ ಕೋರ್ಟ್, ಶೌಚಾಲಯ,ಕರ್ನಾ ಟಕದ ಕಲೆ ಸಂಸ್ಕೃತಿಯನ್ನು ಬಿಂಬಿಸುವ ಮಳಿಗೆಗಳು, ವೈನ್ ಪ್ರವಾಸೋದ್ಯಮ ಸೇರಿದಂತೆ ಪ್ರವಾಸಿಗರಿಗೆ ಎಲ್ಲಾ ರೀತಿಯ ಮೂಲಸೌಲಭ್ಯ ಗಳನ್ನು ಕಲ್ಪಿಸಲು ನಿರ್ಧರಿಸಲಾಯಿತು ಎಂದು ಹೇಳಿದರು.
ಭಾರತೀಯ ತಂತ್ರಜ್ಞಾನವನ್ನು ಬಳಸಿ ರೋಪ್ ವೇ ನಿರ್ಮಾಣ ಮಾಡಿದರೆ ಅಂದಾಜು 80 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಪೂರ್ಣಗೊಳ್ಳಲಿದೆ. ಯೂರೋಪಿಯನ್ ತಂತ್ರಜ್ಞಾನವನ್ನು ಬಳಸಿ ರೋಪ್ ವೇ ನಿರ್ಮಾಣ ಮಾಡಿದರೆಅಂದಾಜು 182 ಕೋಟಿಯಿಂದ 240 ಕೋಟಿ ವೆಚ್ಚವಾಗಲಿದೆ. ಒಮ್ಮೆಗೆ 10 ಜನ ಪ್ರಯಾ ಣಿಕರು ಕೇಬಲ್ ಕಾರಿನಲ್ಲಿತಲು ಪಬಹುದು. ಕೇಂದ್ರ ಜಲ ಸಾರಿಗೆ ಇಲಾಖೆಯು ಶೇ.20ರಷ್ಟು ಹಣ ವನ್ನು ಈ ರೋಪ್ ವೇ ಯೋಜ ನೆಗೆ ಹಣ ನೀಡಲಿದೆ ಎಂದು ತಿಳಿಸಿದರು.
ಈ ಯೋಜನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಮಾಡಲಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳಿಸ ಲಾಗುವುದು. ಇದೇ ಮಾದರಿಯಲ್ಲಿ ಶಿವಗಂಗೆ, ಮಧುಗಿರಿಯ ಏಕಶಿಲಾ ಬೆಟ್ಟ ಹಾಗೂ ಗುಂಡಿ ಬಂಡೆಯ ಆವಲಬೆಟ್ಟಗಳಿಗೆ ರೋಪ್ ನಿರ್ಮಾಣ ಮಾಡಲು ಸಹ ಯೋಜನೆ ರೂಪಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೆ.ಎಸ್.ಟಿ.ಡಿ.ಸಿ ವ್ಯವಸ್ಥಾಪಕ ನಿರ್ದೇಶಕರಾದ ವಿಜಯ ಶರ್ಮ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ಇತರರು ಇದ್ದರು.