Advertisement
ಮಂಗಳೂರಿನಿಂದ ಬೆಂಗಳೂರು, ಮೈಸೂರು ಸಹಿತ ಉತ್ತರ ಕರ್ನಾಟಕದ ಕಡೆ ತೆರಳುವ ನೂರಾರು ಮಂದಿ ಗುರುವಾರ ಮಧ್ಯಾಹ್ನ ವೇಳೆಯೇ ಬಸ್ ನಿಲ್ದಾಣಗಳಿಗೆ ಆಗಮಿಸಿದ್ದು, ಜನಸಂದಣಿ ಹೆಚ್ಚಿತ್ತು. ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಸದ್ಯ ರೂಟ್ ಬಸ್ ವ್ಯವಸ್ಥೆ ಸಂಚರಿಸುತ್ತದೆಯೇ ಹೊರತು ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಿಲ್ಲ. ಪ್ರಯಾಣಿಕರ ಜನಸಂದಣಿಗೆ ಅನುಗುಣವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ.
ರಜಾ ಹಿನ್ನೆಲೆಯಲ್ಲಿ ಅ.11 ಆಯುಧ ಪೂಜೆ, ಅ.12ಕ್ಕೆ ವಿಜಯದಶಮಿ, ಅ.13ರಂದು ರವಿವಾರ ಇರುವ ಕಾರಣ ಮಂಗಳೂರಿನಿಂದ ಮೈಸೂರು, ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸಹಿತ ಹಲವು ಕಡೆಗಳಲ್ಲಿ ಬಸ್‌ಗಳಿಗೆ ಪ್ರಯಾಣಿಕರು ಮುಂಗಡ ಬುಕ್ಕಿಂಗ್ ಮಾಡಿರುವ ಕಾರಣ ಸೀಟು ಲಭ್ಯತೆ ಕಡಿಮೆ ಇತ್ತು. ಇದರಿಂದ ಕೆಲವು ಮಂದಿ ಬಸ್‌ಗಳಲ್ಲಿ ನಿಂತುಕೊಂಡೇ ಸಂಚರಿಸಿದರು. ಬೆಂಗಳೂರು-ಮೈಸೂರು- ಮಡಿಕೇರಿ-ಮಂಗಳೂರು ಮತ್ತು ಬೆಂಗಳೂರು-ಹಾಸನ-ಮಂಗಳೂರು ಮಾರ್ಗವಾಗಿ ಹೆಚ್ಚುವರಿ 30 ಬಸ್‌ಗಳನ್ನು ನಿಯೋಜಿಸಲಾಗಿದೆ.
Related Articles
ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿ ನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುವವರಿಗೆ ಖಾಸಗಿ ಬಸ್‌ನಲ್ಲಿ ಟಿಕೆಟ್ ದರ 3 ಸಾ. ರೂ. ಸನಿಹ ಇದೆ. ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಟಿಕೆಟ್ ದರ ಏರಿಕೆ ಮಾಮೂಲಿಯಾಗಿದೆ. ಈ ಹಿಂದೆ ಗೌರಿ-ಗಣಪತಿ ಹಬ್ಬದ ಸಮಯದಲ್ಲೂ ಖಾಸಗಿ ಬಸ್ ಟಿಕೆಟ್ ದರ ಏರಿಸಲಾಗಿತ್ತು. ವಾರಾಂತ್ಯ ರಜೆ ಸಿಕ್ಕಿದ್ದರಿಂದ ಬೆಂಗಳೂರಿನಿಂದ ವಿವಿಧೆಡೆಗೆ ಪ್ರಯಾಣ ಬೆಳೆಸುವವರ ಸಂಖ್ಯೆಯೂ ಅಧಿಕವಾಗಿದೆ. ಇದು ಕೂಡ ಟಿಕೆಟ್ ದರ ಹೆಚ್ಚಳಕ್ಕೆ ಕಾರಣವಾಗಿದೆ.
Advertisement