Advertisement

ಗೂಂಡಾ ಕಾಯ್ದೆ ಅಡಿ ರೌಡಿಶೀಟರ್‌ ಬಂಧನ

11:58 AM Jan 23, 2018 | Team Udayavani |

ಬೆಂಗಳೂರು: ಸಾಕಷ್ಟು ಬಾರಿ ಜೈಲಿಗೆ ಹೋಗಿ ಬಂದಿದ್ದರೂ ಪುನಃ ತನ್ನ ಕೃತ್ಯವನ್ನು ಮುಂದುವರಿಸಿದ್ದ ರೌಡಿಶೀಟರ್‌ನನ್ನು ನಂದಿನಿ ಲೇಔಟ್‌ ಪೊಲೀಸರು ಗೂಂಡಾಕಾಯ್ದೆ ಅಡಿ ಬಂಧಿಸಿದ್ದಾರೆ. ಚಂದನ್‌(20) ಬಂಧಿತ .ಈತನ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

Advertisement

ಈ ಹಿಂದೆ ನಂದಿನಿ ಲೇಔಟ್‌ನ ಜೈಮಾರುತಿನಗರದಲ್ಲಿ ನೆಲೆಸಿರುವ ಈತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದು ಮತ್ತೆ ತನ್ನ ಕೃತ್ಯ ಮುಂದುವರೆಸುತ್ತಿದ್ದ. ಹೀಗಾಗಿ ಈತನ ವಿರುದ್ಧ ನಂದಿನಿ ಲೇಔಟ್‌ ಇನ್‌ಸ್ಪೆಕ್ಟರ್‌ ಗೂಂಡಾ ಕಾಯ್ದೆ ಅಡಿ ಬಂಧಿಸಲು ನಗರ ಪೊಲೀಸರಿಗೆ ಮನವಿ ಮಾಡಿದ್ದರು. ಇದಕ್ಕೆ ಆಯುಕ್ತರು ಕೂಡ ಒಪ್ಪಿಗೆ ಸೂಚಿಸಿದ್ದರು.

ಆರೋಪಿ ಮನೆ ಮುಂದೆ ನಿಂತಿದ್ದ, ರಸ್ತೆ ಬದಿ ವಾಹನಗಳ ಗಾಜು ಹೊಡೆದು ಬೆಂಕಿ ಹಚ್ಚುವುದು, ಸಾರ್ವಜನಿಕರನ್ನು ಬೆದರಿಸಿ ಸುಲಿಗೆ ಮಾಡುವುದು, ದರೋಡೆ ಸೇರಿದಂತೆ ನಾನಾ ರೀತಿಯ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ಎಂದು ನಂದಿನಿ ಲೇಔಟ್‌ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next