Advertisement

Actor Darshan ರಾಜಾತಿಥ್ಯ: ಕಾರಾಗೃಹ ಡಿಜಿಪಿಗೆ ವಿವರಣೆ ಕೇಳಿ ನೋಟಿಸ್‌ ಕಳುಹಿಸಿದ ಸರಕಾರ

01:28 AM Aug 31, 2024 | Team Udayavani |

ಬೆಂಗಳೂರು: ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ದಲ್ಲಿ ರಾಜಾತಿಥ್ಯ ನೀಡಿದ ವಿವಾದಕ್ಕೆ ಸಂಬಂಧಪಟ್ಟಂತೆ ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ರಾಜ್ಯ ಸರಕಾರವು ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ವಿಚಾರಣಾಧೀನ ಕೈದಿಗಳಿಗೆ ಕಾರಾಗೃಹ ನಿಯಮಾವಳಿಗಳಿಗೆ ವಿರುದ್ಧವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಸವಲತ್ತು ನೀಡಿದ ಪ್ರಕರಣ ರಾಜ್ಯ ಸರಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಸಿಎಂ ಕಾರ್ಯಾಲಯ ಖಚಿತಪಡಿಸಿದೆ. ಶುಕ್ರವಾರವೇ ಈ ನೋಟಿಸ್‌ ಮಾಲಿನಿಯವರಿಗೆ ತಲುಪಿದೆ. ಅವರು ಡಿಜಿಪಿ ದರ್ಜೆಯ ಅಧಿಕಾರಿ ಯಾಗಿರುವುದರಿಂದ ನೇರವಾಗಿ ಸರಕಾರದಿಂದಲೇ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಕೊಲೆ ಆರೋಪಿ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದು ಸಂಚಲನಕ್ಕೆ ಕಾರಣವಾಗಿತ್ತು. ಜತೆಗೆ ರಾಜ್ಯ ಸರಕಾರ ಹಾಗೂ ಕಾರಾಗೃಹ ಇಲಾಖೆ ವಿರುದ್ಧ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಪ್ರಕರಣದಲ್ಲಿ ಜೈಲಿನ 9 ಮಂದಿ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next