Advertisement
ಬರ ಪರಸ್ಥಿತಿ ಹಾಗೂ ಇತರೆ ನೈಸರ್ಗಿಕ ವಿಪತ್ತುಗಳಿಂದ ಉದ್ಭವಿಸಬಹುದಾದ ಪರಿಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ ತಾಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಯಲು ಸ್ಥಳದಲ್ಲಿಯೇ ಉದ್ಯೋಗ ನೀಡಲು ಹಾಗೂ ಈ ಕುರಿತು ಜನರಿಗೆ ಅರಿವು ಮೂಡಿಸಲು ರೋಜಗಾರ ವಾಹಿನಿಯ ಮೂಲಕ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮ ಪಂಚಾಯತಿಯಲ್ಲಿ ಬರುವ ಪ್ರತಿಯೊಂದು ಹಳ್ಳಿಗಳಿಗೆ ವಾಹಿನಿ ಆಗಮಿಸಲಿದ್ದು ಈ ಸಂದರ್ಭದಲಿ ಜನರಿಗೆ ಸಂಪೂರ್ಣ ಮಾಹಿತಿ ನೀಡುವುದು ಕೂಲಿಕಾರರ ಕೂಲಿ ಬೇಡಿಕೆ, ಹೊಸ ಉದ್ಯೋಗ ಚೀಟಿ ಬೇಡಿಕೆ ಮತ್ತು ವೈಯಕ್ತಿಕ ಕಾಮಗಾರಿಗಳ ಬೇಡಿಕೆಯನ್ನು ಈಡೇರಿಸುವುದು ರೋಜಗಾರ ವಾಹಿನಿ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಸ್ವಚ್ಛ ಭಾರತ ಮಿಷನ್ ಅಡಿ ‘ಸ್ವಚ್ಛಮೇವ ಜಯತೆ’ ಕಾರ್ಯಕ್ರಮವನ್ನು ತಾಲೂಕಿನಾದ್ಯಂದ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಪ್ರತಿಯೊಂದು ಗ್ರಾಮಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮ, ಸ್ವಚ್ಛಥಾ ರಥ ಯಾತ್ರೆ, ಪ್ರಬಂಧ, ಚರ್ಚಾ ಸ್ಪರ್ಧೆ, ಶ್ರಮದಾನ, ಜಾಗೃತಿ ಜಾಥಾ, ಗೋಡೆ ಬರಹ, ಕರಪತ್ರ, ಬ್ಯಾನರ್ ಅಭಿಯಾನದ ಜೊತೆಗೆ ಮತ್ತುನರೇಗಾ ಯೋಜನೆಯ ರೋಜಗಾರ ವಾಹಿನಿಯಲ್ಲಿ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ, ಘನ ತ್ಯಾಜ್ಯ ನಿರ್ವಹಣೆ ವಿಧಾನಗಳು, ಹಸಿ ಕಸ, ಒಣ ಕಸ ವಿಂಗಡಣೆ, ಎರಡು ಶೌಚ ಗುಂಡಿಯ ನಿರ್ಮಾಣ, ಉಪಯೋಗ ಮತ್ತು ಎಲ್ಒಬಿಯಡಿ ಶೌಚಾಲಯ ನಿರ್ಮಾಣ ಮಾಡುವುದು, ಸ್ವಚ್ಛ ಭಾರತ ಮಿಷನ್(ಗ್ರಾಮೀಣ) ಯೋಜನೆಯಡಿ ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ, ಬಳಕೆ, ಶಾಲಾ ಮತ್ತು ಅಂಗನವಾಡಿ ಶೌಚಾಲಯಗಳನ್ನು ಉಪಯೋಗ ಮಾಡಲು ವಿದ್ಯಾರ್ಥಿಗಳಲ್ಲಿ ಹಾಗೂ ಶಿಕ್ಷಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಾಪಂ ಇಒ ತಿಳಿಸಿದ್ದಾರೆ. Advertisement
ರೋಜಗಾರ ವಾಹಿನಿ ಜಾಗೃತಿ
10:52 AM Jun 12, 2019 | Suhan S |
Advertisement
Udayavani is now on Telegram. Click here to join our channel and stay updated with the latest news.