Advertisement

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

11:05 AM Dec 29, 2024 | Team Udayavani |

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರ ಆರೋಪವು ತನಿಖೆಯಲ್ಲಿ ಕಂಡು ಬಂದಿರುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡವು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.

Advertisement

ತಮ್ಮ ವಿರೋಧಿಗಳನ್ನು ಎಚ್‌ಐವಿ ಪೀಡಿತರ ಮೂಲಕ ಹನಿಟ್ರಾÂಪ್‌ ಖೆಡ್ಡಾಕ್ಕೆ ಬೀಳಿಸಿ ಏಡ್ಸ್‌ ಹರಡುವಿಕೆಗೆ ಶಾಸಕ ಮುನಿರತ್ನ ಪ್ರಯತ್ನಿಸಿದ್ದರು. ಪ್ರಕರಣದ ಎ3 ಸುಧಾಕರ್‌, ಎ7 ಪಿ.ಶ್ರೀನಿವಾಸ್‌ ಹಾಗೂ ಎ8 ಇನ್‌ಸ್ಪೆಕ್ಟರ್‌ ಐಯ್ಯಣ್ಣ ರೆಡ್ಡಿ ಮುನಿರತ್ನಗೆ ಸಹಕರಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಎಸ್‌ಐಟಿ ಉಲ್ಲೇಖೀಸಿದೆ ಎಂದು ತಿಳಿದು ಬಂದಿದೆ. ಇನ್‌ಸ್ಪೆಕ್ಟರ್‌ ಐಯ್ಯಣ್ಣ ರೆಡ್ಡಿ ಎಸ್‌ ಐಟಿಯಿಂದ ಬಂಧನಕ್ಕೊಳಗಾಗಿದ್ದಾರೆ. ಈ ನಡುವೆ ಎಸ್‌ಐಟಿ 2,481 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದೆ. ನ್ಯಾಯಾಧೀಶರ ಮುಂದೆ ಸಿಆರ್‌ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. ಎಸ್‌ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದೆ.

ಆರೋಪಿಗಳ ವಿರುದ್ಧ ಪ್ರಮುಖವಾಗಿ ಜೀವಕ್ಕೆ ಅಪಾಯಕಾರಿ ಕಾಯಿಲೆಯ ಸೋಂಕನ್ನು ಹರಡುವ ಮಾರಣಾಂತಿಕ ಕೃತ್ಯಕ್ಕಾಗಿ ಸೆಕ್ಷನ್‌ 270 ಮತ್ತು ವ್ಯಕ್ತಿಯ ಖಾಸಗಿ ಚಿತ್ರವನ್ನು ಒಪ್ಪಿಗೆಯಿಲ್ಲದೆ ಸೆರೆಹಿಡಿದಿದ್ದಕ್ಕೆ ಐಟಿ ಕಾಯ್ದೆ 2000ರ ಸೆಕ್ಷನ್‌ 66ಇ, ಲೈಂಗಿಕ ಕಿರುಕುಳಕ್ಕಾಗಿ ಐಪಿಸಿ 354ಎ, ಅನುಮತಿ ಇಲ್ಲದೆ ಮಹಿಳೆಯ ಅಶ್ಲೀಲ ದೃಶ್ಯ ಸೆರೆಹಿಡಿದಿರುವುದಕ್ಕೆ ಸೆಕ್ಷನ್‌ 354 ಸಿ, ಮಹಿಳೆಯ ಮೇಲೆ ಪದೇಪದೆ ಅತ್ಯಾಚಾರವೆಸಗಿದ್ದಕ್ಕಾಗಿ ಐಪಿಸಿ ಸೆಕ್ಷನ್‌ 376 (2), ಸಂತ್ರಸ್ತೆಯ ಕೊಲ್ಲುವ ಉದ್ದೇಶಕ್ಕೆ ಸೆಕ್ಷನ್‌ 308, ಅಪರಾಧಿಕ ಒಳಸಂಚಿಗೆ ಸೆಕ್ಷನ್‌ 120 ಬಿ, ಉದ್ದೇಶಪೂರ್ವಕವಾಗಿ ಅವಮಾನಕ್ಕಾಗಿ ಸೆಕ್ಷನ್‌ 504ರ ಅಡಿಯಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದೆ.

ಮುನಿರತ್ನ “ಆ್ಯಸಿಡ್‌ ಮೊಟ್ಟೆ ಸಿನೆಮಾ 100 ದಿನ ಓಡಿಸಿ: ಡಿಕೆಸು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ನಡೆದ ಆ್ಯಸಿಡ್‌ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತವಾಗಿದ್ದು, ಮುನಿರತ್ನ ಅಭಿನಯದ ಆ್ಯಸಿಡ್‌ ಮೊಟ್ಟೆ’ ಸಿನೆಮಾ 100 ದಿನ ಓಡಿಸಿ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ವಾಗ್ಧಾಳಿ ನಡೆಸಿದರು.

Advertisement

ತಮ್ಮ ನಿವಾಸ ದಲ್ಲಿ ಸುದ್ದಿಗಾರರ ಜತೆ ಅವರು ಮಾತನಾಡಿ, ವೀಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು, ನನ್ನ ಮೇಲೆ, ನನ್ನ ಸಹೋದರ ಹಾಗೂ ಕಾಂಗ್ರೆಸ್‌ ಪರಾಜಿತ ಅಭ್ಯರ್ಥಿ ಕುಸುಮಾ ಹಾಗೂ ಅವರ ತಂದೆ ವಿರುದ್ಧ ನೇರ ಆರೋಪ ಮಾಡಿದ್ದಾರೆ.

ಈ ವೀಡಿಯೋ ಅತ್ಯುತ್ತಮವಾಗಿ ಮೂಡಿ ಬಂದಿದೆ. ಆ್ಯಸಿಡ್‌ ದಾಳಿ ಎಂದ 3 ಸೆಕೆಂಡ್‌ನ‌ಲ್ಲಿ ಮೊಟ್ಟೆ ಎಸೆಯಲಾಗಿದೆ. ಕನ್ನಡ ಚಿತ್ರರಂಗದ ಅಧ್ಯಕ್ಷ, ನಿರ್ಮಾಪಕರು, ಚಿತ್ರಕಥೆ ತಿರುಚುವ ಕೆಲಸ ಮಾಡಿದ್ದ ಮುನಿರತ್ನ, ಈಗ ತಾವೇ ನಟನೆಗೂ ಇಳಿದಿದ್ದಾರೆ ಎಂದು ಈ ವೀಡಿಯೋ ನೋಡಿದ ಮೇಲೆ ನನಗೆ ತಿಳಿಯಿತು. ಅಭಿನಯ ಮಾಡಿದ ಅವರಿಗೂ ಅಭಿನಂದನೆಗಳು’ ಎಂದು ವ್ಯಂಗ್ಯವಾಡಿದರು.

ಈ ಪ್ರಕರಣವನ್ನು ಸಿಬಿಐಗೆ ನೀಡಲಿ. ಅವರು ಗೃಹಮಂತ್ರಿಗೆ ಪತ್ರ ಬರೆದು ಎಸ್‌ಪಿಜಿ ಭದ್ರತೆಯನ್ನೇ ಪಡೆಯಲಿ. ಅವರ ಹತ್ತಿರ ರಘು ಎಂಬ ಚಾಲಕ ಇದ್ದ. ಅವನು ಏನಾಗಿದ್ದಾನೆ ಎಂದು ತಿಳಿಯಬೇಕಲ್ಲವೇ ಎಂದು ಪ್ರಶ್ನಿಸಿದರು.

ಏನಿದು ಪ್ರಕರಣ? ಸೆ. 18ರಂದು ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ಮುನಿರತ್ನ ಸೇರಿ 7 ಮಹಿಳೆಯರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರಕಾರ ಎಸ್‌ಐಟಿ ರಚಿಸಿತ್ತು. ಇದೀಗ ಮುನಿರತ್ನ ಸೇರಿ ಇತರರ ವಿರುದ್ಧ ಎಸ್‌ ಐಟಿ ದೋಷಾರೋಪ ಪಟ್ಟಿ ಸಲ್ಲಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next