Advertisement
ಮತದಾನಕ್ಕೆ ಹೆಚ್ಚು ಸೋಂಕಿತರು ಬರುವ ನಿರೀಕ್ಷೆ ಇತ್ತು. ಹೀಗಾಗಿ, ಪಾಲಿಕೆಯ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಕೊರೊನಾ ಸೋಂಕು ದೃಢಪಡುವವರನ್ನು ಮತಗಟ್ಟೆಗೆ ಕರೆದುಕೊಂಡು ಬರುವುದು ಹಾಗೂ ಮತದಾನದ ಬಳಿಕ ಅವರನ್ನು ಮನೆಗೆ ತಲುಪಿಸಲು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಇದಕ್ಕೆ ಕೊರೊನಾ ಸೋಂಕು ದೃಢಪಟ್ಟವರು ಹಾಗೂ ಸೋಂಕಿನ ಲಕ್ಷಣ ಇರುವರಿಂದ ನಿರೀಕ್ಷಿತ ಪ್ರಮಾಣದಲ್ಲಿ ಸ್ಪಂದನೆ ಸಿಗಲಿಲ್ಲ. ಆರ್. ಆರ್. ನಗರದಲ್ಲಿ ಒಟ್ಟು 1,500ಕ್ಕೂ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಅಂದಾಜಿಸಲಾಗಿತ್ತು. ಈ ಪೈಕಿ 148 ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಮತದಾರರು ಎಂದು ಗುರುತಿಸಲಾಗಿತ್ತು.
Advertisement
ರಾಜರಾಜೇಶ್ವರಿ ನಗರ ಉಪಚುನಾವಣೆ: ನಾಲ್ವರು ಕೋವಿಡ್ ಸೋಂಕಿತರಿಂದ ಮತದಾನ
11:59 PM Nov 03, 2020 | sudhir |
Advertisement
Udayavani is now on Telegram. Click here to join our channel and stay updated with the latest news.