Advertisement
ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತಿದ್ದು ರಸ್ತೆ ವಿಭಾಜಕ ಗಳನ್ನು ಅಳವಡಿಸಲಾಗುತ್ತಿದೆ. ನಗರೋತ್ಥಾನ ಯೋಜನೆಯಡಿ ಶಾಸಕ ಸುನಿಲ್ ಕುಮಾರ್ ಅನುದಾನ ಒದಗಿಸಿದ್ದು ಕಾಮಗಾರಿ ಪ್ರಗತಿ ಯಲ್ಲಿದೆ. ಕಡ್ತಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಈಗಾಗಲೇ ಪ್ರಮುಖ ಪಂಚ ಬೃಹತ್ ಸೇತುವೆಗಳನ್ನು ನಿರ್ಮಿಸಲಾಗಿದೆ. ಇದೀಗ ಪ್ರಮುಖ ರಸ್ತೆಗಳ ಅಭಿವೃದ್ಧಿಗಳು ನಡೆಯುತ್ತಿವೆ.
ಪಂಚಾಯತ್ ವ್ಯಾಪ್ತಿಯ ಪಟ್ಟಿಬಾವು ಸೇತುವೆಯ ಕಾಮಗಾರಿ ಅಂತಿಮ ಹಂತ ದಲ್ಲಿದ್ದು ಮಾರ್ಚ್ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಗೊಳ್ಳಲಿದೆ ಎಂದು ಪಂಚಾಯತ್ ಅಧ್ಯಕ್ಷ ಅರುಣ್ ಕುಮಾರ್ ತಿಳಿಸಿದ್ದಾರೆ.