Advertisement

ನಗರದ ಸಮಗ್ರ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲು

06:28 AM Feb 26, 2019 | |

ಬೆಂಗಳೂರು: ನಗರದ ಸಮಗ್ರ ಅಭಿವೃದ್ಧಿಗಾಗಿ 1 ಲಕ್ಷ ಕೋಟಿ ರೂ.ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

Advertisement

ಮಹಾಲಕ್ಷ್ಮೀ ಬಡಾವಣೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 16 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಹಿಂದಿನ ಸರ್ಕಾರ ಬಡ ವರ್ಗದವರಿಗೆ ಒಂದು ಲಕ್ಷ ಮನೆ ನಿರ್ಮಿಸುವ ಯೋಜನೆಗೆ ಚಾಲನೆ ನೀಡಿದ್ದು, ಶೀಘ್ರವೇ ಆ ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು.

ಸಬ್‌ಅರ್ಬನ್‌ ರೈಲು ಯೋಜನೆಗೆ 23 ಸಾವಿರ ಕೋಟಿ ರೂ. ವ್ಯಯವಾಗುವ ಸಾಧ್ಯತೆಯಿದ್ದು, ಯೋಜನೆ ಜಾರಿ ಸಂಬಂಧ ರೈಲ್ವೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಜತೆಗೆ 17 ಸಾವಿರ ಕೋಟಿ ರೂ.ವೆಚ್ಚದಲ್ಲಿ ಪೆರಿಫೆರಲ್‌ ರಿಂಗ್‌ ರಸ್ತೆ ನಿರ್ಮಾಣ ಕಾರ್ಯಕ್ಕೂ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು ಎಂದು ಹೇಳಿದರು. 

ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಬಿಬಿಎಂಪಿಗೆ 8,015 ಕೋಟಿ ರೂ ಮೀಸಲಿಡಲಾಗಿದೆ. ಜತಗೆ 5ನೇ ಹಂತದ ಕಾವೇರಿ ಯೋಜನೆಗೆ 5 ಸಾವಿರ ಕೋಟಿ ರೂ. ನೀಡಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಶೇಷಾದ್ರಿ ರಸ್ತೆಯ ಮಹಾರಾಣಿ ಕಾಲೇಜು ಆವರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮೇಯರ್‌ ಗಂಗಾಂಬಿಕೆ , ಶಾಸಕ ಗೋಪಾಲಯ್ಯ, ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌, ಉಪಮೇಯರ್‌ ಭದ್ರೇಗೌಡ ಉಪಸ್ಥಿತರಿದ್ದರು.

Advertisement

ಮೂರು ವರ್ಷದಲ್ಲಿ ಮೆಟ್ರೋ ಪೂರ್ಣ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಮಾತನಾಡಿ, ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ಮೂರು ವರ್ಷದ ಅವಧಿಯಲ್ಲಿ ಮೇಟ್ರೊ ರೈಲು ಯೋಜನೆಯ ಉಳಿದ ಕಾಮಗಾರಿಯನ್ನು ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದರು. 

ಮುಂದಿನ ಮೂರ್‍ನಾಲ್ಕು ತಿಂಗಳೊಳಗೆ ನಗರದಾದ್ಯಂತ ವೈ-ಫೈ ಸಂಪರ್ಕ ಕಲ್ಪಿಸಲಾಗವುದು. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲೂ ಗ್ರಂಥಾಲಯದ ಜತೆಗೆ ಸ್ಪರ್ಧಾತ್ಮಕ ಕೇಂದ್ರಗಳನ್ನು ನಿರ್ಮಿಸುವ ಚಿಂತನೆಯಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next