Advertisement

ಮುದೂರು-ಗುಂಡಿನಹೊಳೆ ರಿಂಗ್‌ ರಸ್ತೆಗೆ 10 ಕೋ.ರೂ.: ಗೋಪಾಲ ಪೂಜಾರಿ

08:20 AM Aug 17, 2017 | Harsha Rao |

ಕೊಲ್ಲೂರು: ಬಹು ವರುಷಗಳ ಹೋರಾಟದ ಬಳಿಕ ಬಸ್ರಿಬೇರು ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, ಸೌಲಭ್ಯದ ಉದ್ಘಾಟನ ಸಮಾರಂಭ ಆ.15ರಂದು ಬಸ್ರಿಬೇರಿನಲ್ಲಿ ನಡೆಯಿತು. ರಾಜ್ಯ ಸರಕಾರದ ವಿಶೇಷ ಅನುದಾನದಡಿ 35 ಲಕ್ಷ ರೂ. ವೆಚ್ಚದಲ್ಲಿ ಒದಗಿಸಲಾದ ವಿದ್ಯುತ್‌ ಸಂಪರ್ಕ ವ್ಯವಸ್ಥೆಯನ್ನು ಉದ್ಘಾಟಿಸಿದ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ, ಅತೀ ಹಿಂದುಳಿದ ಪ್ರದೇಶವಾಗಿರುವ ಬಸ್ರಿಬೇರಿನ ತಾಂತ್ರಿಕ ದೋಷಗಳನ್ನು ನಿವಾರಿಸಲಾಗಿದ್ದು ಈ ಭಾಗದ ಜನರ ಬೇಡಿಕೆ ಈಡೇರಿಸಲಾಗಿದೆ ಎಂದರು.

Advertisement

ಮುದೂರು ಮೈದಾನದಿಂದ ಉದಯ ನಗರ ಹಾಗೂ ಗುಂಡಿನಹೊಳೆ ರಿಂಗ್‌ ರಸ್ತೆ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆಯಾಗಿದ್ದು ಟೆಂಡರ್‌ ಕರೆಯಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಜಡ್ಕಲ್‌ ಪಂಚಾಯತ್‌ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿಗೆ  1 ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ಭೋವಿ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸಬೇಕೆಂಬ ಈ ಭಾಗದ ಜನರ ಒತ್ತಾಯಕ್ಕೆ ಸರಕಾರ
ಸ್ಪಂದಿಸಿದ್ದು ಅನುಮತಿಯ ಆದೇಶ ನೀಡಿದೆ. ಕೊಲ್ಲೂರು-ಮುದೂರು- ಜಡ್ಕಲ್‌ ಸಹಿತ ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ಜನರ ಮೂಲ ಸಮಸ್ಯೆಗಳಿಗೆ ಸ್ಪಂದಿಸಲಾಗಿದ್ದು ಮಿಕ್ಕುಳಿದ ಯಾವುದೇ ಸಮಸ್ಯೆ ಇದ್ದಲ್ಲಿ ಖಂಡಿತ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ಜಿ.ಪಂ. ಸದಸ್ಯ ಶಂಕರ ಪೂಜಾರಿ, ತಾ.ಪಂ. ಸದಸ್ಯೆ ಗ್ರೀಷ್ಮ ಭಿಡೆ, ಜಡ್ಕಲ್‌ ಗ್ರಾ.ಪಂ. ಅಧ್ಯಕ್ಷ ಅನಂತಮೂರ್ತಿ, ಮಾಜಿ ಅಧ್ಯಕ್ಷ ದೇವದಾಸ್‌, ವಿಎಸ್‌ಎಸ್‌ ಬ್ಯಾಂಕ್‌ ಅಧ್ಯಕ್ಷ ಪಿ.ಎಲ್‌.ಜೋಸ್‌, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರಮೇಶ ಗಾಣಿಗ ಮುಂತಾದವರು ಉಪಸ್ಥಿತರಿದ್ದರು.
ವಿದ್ಯಾ ದಿನೇಶ ಸ್ವಾಗತಿಸಿದರು. ಉದಯ ಕಾರ್ಯಕ್ರಮ ನಿರೂಪಿಸಿ, ವಸಂತಿ ಮರಾಠಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next