Advertisement
ಈ ಬಗ್ಗೆ ಮಂಗಳವಾರ ಹೇಳಿಕೆ ನೀಡಿರುವ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, “ಶನಿವಾರ ಹಾಸನ ಜಿಲ್ಲೆಗೆ ಭೇಟಿ ನೀಡಿ ಕೋವಿಡ್ ಸ್ಥಿತಿ ಪರಿಶೀಲನೆ ನಡೆಸಿದ ವೇಳೆ ಜಿಲ್ಲಾಧಿಕಾರಿಗಳು ಹೆಚ್ಚುವರಿ ಬೆಡ್, ಔಷಧಿ ಖರೀದಿ ಹಾಗೂ ಖಾಸಗಿ ಲ್ಯಾಬ್ ಗಳಲ್ಲಿ ಕೋವಿಡ್ ಸ್ಯಾಂಪಲ್ ಪರೀಕ್ಷೆಗೆ ಹಣಕಾಸು ಕೊರತೆ ಇದೆ ಎಂದು ತಿಳಿಸಿದರು. ಸೋಮವಾರ ಈ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದೆ. ಅದರಂತೆ ಸೋಮವಾರ ಮಧ್ಯಾಹ್ನದ ಒಳಗಾಗಿಯೇ 10 ಕೋಟಿ ರೂ.ಗಳನ್ನು ಹಾಸನ ಜಿಲ್ಲೆಗೆ ಮಂಜೂರು ಮಾಡಲಾಗಿದೆ” ಎಂದರು.
Related Articles
Advertisement
ಕೋವಿಡ್ ಕೆಲಸದಲ್ಲಿ ರಾಜ್ಯ ಸರಕಾರ ಕ್ಷಿಪ್ರವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇದೊಂದು ಉದಾಹರಣೆಯಷ್ಟೇ. ಸೋಂಕು ನಿವಾರಣೆ ವಿಷಯದಲ್ಲಿ ಸರಕಾರ ಯಾವುದೇ ಮೀನಾಮೇಷ ಎಣಿಸುವುದಿಲ್ಲ. ಖರ್ಚು ಮಾಡಲು ಹಿಂಜರಿಯುತ್ತಿಲ್ಲ. ಯಾವುದೇ ಸೌಲಭ್ಯ ಬೇಕಿದ್ದರೂ ತಕ್ಷಣವೇ ಒದಗಿಸಲಾಗುತ್ತಿದೆ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ತಿಳಿಸಿದರು.