Advertisement
ಈ ಕುರಿತು ಎಕ್ಸ್ ನಲ್ಲಿ ಬಾಂಬರ್ ಫೋಟೋ ಹಂಚಿಕೊಂಡಿರುವ ಎನ್ಐಎ ಅಧಿಕಾರಿಗಳು , ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಹೇಳಿದೆ. ಒಂದು ವೇಳೆ ಸುಳಿವು ಸಿಕ್ಕರೆ 080289510999 ಮತ್ತು 8904241100 ಈ ನಂಬರ್ ಗಳಿಗೆ ಮಾಹಿತಿ ನೀಡಬಹುದು.ಇನ್ನು ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್ಐಎ ಹೇಳಿದೆ.
ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಜೊತೆಗೆ ಬೆಂಗಳೂರು ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.