Advertisement

ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಡಾ.ಅಶ್ವತ್ಥ ನಾರಾಯಣ

01:05 PM Jul 28, 2022 | Team Udayavani |

ಬೆಂಗಳೂರು: ಸಮಾಜ ವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕ ವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

Advertisement

ಗುರುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ”ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ ಎಂದರು.

10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅವರು ಗದ್ಗದಿತರಾದರು.

ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರವಾಗಿದ್ರೆ ಕಲ್ಲು ಹೊಡೆಯಬಹುದಿತ್ತು,ಆದರೆ..: ತೇಜಸ್ವಿ ಸೂರ್ಯ ಆಡಿಯೋ ವೈರಲ್

ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next