ಹೊಸದಿಲ್ಲಿ: 2022 ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್ ನಲ್ಲಿ ಅಧಿಕಾರಕ್ಕೆ ಬಂದರೆ 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 1000 ರೂ. ನೀಡುವುದಾಗಿ ಪಕ್ಷದ ಮುಖಂಡ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.
ಪಂಜಾಬ್ ನ ಮೊಗಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ಇದು ವಿಶ್ವದ ಅತಿದೊಡ್ಡ ಮಹಿಳಾ ಸಬಲೀಕರಣ ಕಾರ್ಯಕ್ರಮವಾಗಿದೆ” ಎಂದು ಹೇಳಿದರು.
ಇದನ್ನೂ ಓದಿ:ಬಿಜೆಪಿಗೆ ಸಹಕರಿಸಲು ಟಿಎಂಸಿ ಮತ್ತು ಆಪ್ ಗೋವಾಕ್ಕೆ ಬಂದಿವೆ : ಗುಂಡೂರಾವ್
“ನಾವು 2022 ರಲ್ಲಿ ಪಂಜಾಬ್‌ನಲ್ಲಿ ಸರ್ಕಾರವನ್ನು ರಚಿಸಿದರೆ, ನಾವು 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 1000 ರೂ ನೀಡುತ್ತೇವೆ. ಒಂದು ಕುಟುಂಬವು 3 ಮಹಿಳಾ ಸದಸ್ಯರನ್ನು ಹೊಂದಿದ್ದರೆ ಪ್ರತಿಯೊಬ್ಬರಿಗೂ ರೂ 1000 ಸಿಗುತ್ತದೆ. ಇದು ವಿಶ್ವದ ಅತಿದೊಡ್ಡ ಮಹಿಳಾ ಸಬಲೀಕರಣ ಕಾರ್ಯಕ್ರಮವಾಗಿದೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.
Related Articles
ಮಂಗಳವಾರ (ನವೆಂಬರ್ 23) ಅಮೃತಸರದಲ್ಲಿ ಕೇಜ್ರಿವಾಲ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದು, ನಂತರ ಅವರು ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.