Advertisement
ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ 10ಕೋಟಿ ವೆಚ್ಚದಲ್ಲಿ ರಾಮಾಪುರ-ಕೌದಳ್ಳಿ ಮಾರ್ಗದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಚಿವ ಸೋಮಣ್ಣ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ತಾಲೂಕು, ಜಿಲ್ಲೆ, ರಾಜ್ಯ ಮಾತ್ರವಲ್ಲದೆ ದೇಶದ ನಾನಾ ಮೂಲಗಳಿಂದ ಸಹಸ್ರಾರು ಭಕ್ತಾದಿಗಳು ಆಗಮಿಸುತ್ತಾರೆ. ಅವರಿಗೆ ಸುಸಜ್ಜಿತ ರಸ್ತೆ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಶಾಸಕ ನರೇಂದ್ರ ಅವರು ಪ್ರಾಮಾಣಿಕವಾಗಿ ಸೇವೆ ಮಾಡುತ್ತಾ ಬಂದಿದ್ದು ರಾಮಾಪುರ-ಕೌದಳ್ಳಿ ರಸ್ತೆ ಅಭಿವೃದ್ಧಿಗೆ 10 ಕೋಟಿ ಅನುದಾನ ನೀಡಿದ್ದಾರೆ ಎಂದು ಹೊಗಳಿಕೆಯ ಸುರಿಮಳೆಗೈದರು.
Related Articles
Advertisement
ಇದೇ ವೇಳೆ ಶಾಸಕ ನರೇಂದ್ರ ಮಾತನಾಡಿ ರಾಮಾಪುರ – ಕೌದಳ್ಳಿ ಮಾರ್ಗದ ರಸ್ತೆಯ ಅಭಿವೃದ್ಧಿಗೆ ಕಳೆದ 1 ವರ್ಷದ ಹಿಂದೆಯೇ ಅನುದಾನ ಮಂಜೂರು ಮಾಡಿ ಕ್ರಮವಹಿಸಲಾಗಿತ್ತು. ಆದರೆ ಕೆಲ ತಾಂತ್ರಿಕ ದೋಷಗಳಿಂದ ಈ ರಸ್ತೆಗೆ ಮೀಸಲಿಟ್ಟಿದ್ದ ಅನುದಾನವನ್ನೂ ಮಹದೇಶ್ವರಬೆಟ್ಟ ರಸ್ತೆ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲು ಪ್ರಕ್ರಿಯೆ ಜರುಗಿದ್ದವು. ಬಳಿಕ ಈ ಸಂಬಂಧ ಲೋಕೋಪಯೋಗಿ ಇಲಾಖಾ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಪತ್ರ ವ್ಯವಹಾರ ನಡೆಸಿ ಮತ್ತೆ ಆ ಅನುದಾನವನ್ನು ಈ ರಸ್ತೆಗೆ ಹಾಕಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು. ಇದಲ್ಲದೆ ಹನೂರು ಕ್ಷೇತ್ರ ವ್ಯಾಪ್ತಿಗೆ ಒಳಪಡುವ ರಸ್ತೆಗಳು ಹಾಳಾಗಿದ್ದು ದುರಸ್ಥಿಗೊಳ್ಳಬೇಕಿರುವ ರಸ್ತೆಗಳ ಪಟ್ಟಿಯನ್ನು ಸಚಿವರಿಗೆ ಸಲ್ಲಿಸಲಾಗಿದ್ದು ಗತ್ಯ ಅನುದಾನ ಮಂಜೂರು ಮಾಡಿಕೊಡುವಂತೆ ಸಚಿವರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ತಹಸೀಲ್ದಾರ್ ನಾಗರಾಜು, ಡಿವೈಎಸ್ಪಿ ನಾಗರಾಜು, ಲೋಕೋಪಯೋಗಿ ಇಲಾಖೆಯ ಎಸ್‍ಇ ರಾಥೋಡ್, ಇಇ ವಿನಯ್, ಎಇಇ ಸದಾನಂದಮೂರ್ತಿ, ಜೆಇ ಮಹೇಶ್, ಗ್ರಾ.ಪಂ ಅಧ್ಯಕ್ಷೆ ದಾಕ್ಷಾಯಿಣಿ, ಉಪಾಧ್ಯಕ್ಷ ಮುರುಗೇಶ್, ಜಿ.ಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಬಿಜೆಪಿ ಜಿಲ್ಲಾ ಸಂಯೋಜಕ ವೆಂಕಟೇಶ್ ಇನ್ನಿತರರು ಹಾಜರಿದ್ದರು.