Advertisement

ಮಹದೇಶ್ವರ ಹುಂಡಿಯಲ್ಲಿ 1.40 ಕೋಟಿ ರೂ. ಸಂಗ್ರಹ

07:04 AM Feb 01, 2019 | Team Udayavani |

ಹನೂರು: ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರನ ಸನ್ನಿಧಿಯ ಹುಂಡಿಯಲ್ಲಿ ದಾಖಲೆಯ 1.39 ಕೋಟಿ ರೂ. ನಗದು, 38 ಗ್ರಾಂ ಚಿನ್ನ ಮತ್ತು 912 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

Advertisement

ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಬಸ್‌ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಗುರುವಾರ ಬೆಳಗ್ಗೆ 7ಗಂಟೆಗೆ ಸಾಲೂರು ಬೃಹನ್ಮಾಠಧ್ಯಕ್ಷ ಗುರುಸ್ವಾಮೀಜಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೊಲೀಸ್‌ ಬಂದೋಬಸ್ತ್ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. ಎಣಿಕೆ ಕಾರ್ಯ ರಾತ್ರಿ 8.30ರವರೆಗೂ ನಡೆಯಿತು.

ಈ ಬಾರಿ ಹೊಸ ವರ್ಷಾಚರಣೆ, ಮಕರ ಸಂಕ್ರಾಂತಿ ಹಬ್ಬ, ಗಭರಾಜ್ಯೋತ್ಸವದ ರಜೆ, ಬಂದ್‌ ಹಿನ್ನೆಲೆ ಸಾಲು ಸಾಲು ರಜೆಗಳಿದ್ದ ಹಿನ್ನೆಲೆ ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಮ.ಬೆಟ್ಟಕ್ಕೆ ಭೇಟಿ ನೀಡಿದ್ದು, ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು. 1,39,97,950 ರೂ. ನಗದು, 38 ಗ್ರಾಂ ಚಿನ್ನ ಹಾಗೂ 912 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ

ಎಣಿಕೆ ಸಂದರ್ಭದಲ್ಲಿ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕೆ.ಎಂ ಗಾಯತ್ರಿ, ಉಪ ಕಾರ್ಯದರ್ಶಿ ರಾಜಶೇಖರಮೂರ್ತಿ, ಅಧೀಕ್ಷಕ ಬಸವರಾಜು, ಆರೋಗ್ಯ ನಿರೀಕ್ಷಕ ಶ್ರೀಕಾಂತ್‌ ವಿಭೂತಿ, ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ನೌಕರ ಮೋಹನ್‌ಕುಮಾರ್‌, ಎಸ್‌ಬಿಐ ವ್ಯವಸ್ಥಾಪಕ ಸೆಂದಿಲ್‌ನಾಥನ್‌, ಪ್ರಾಧಿಕಾರದ ನೌಕರರು ಹಾಗೂ ದೇಗುಲದ ಸಿಬ್ಬಂದಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮ.ಬೆಟ್ಟ ಪೋಲಿಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next